ಬಿಸಿ ಬಿಸಿ ಸುದ್ದಿ

ಭೀಮಾ, ಕಾಗಿಣಾ ನದಿ ದಡದಲ್ಲಿರುವ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಲಬುರಗಿ: ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಶನಿವಾರ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆವಿದ್ದು, ಇದು ಭೀಕರ ಪ್ರವಾಹದ ಮುನ್ಸೂಚನೆ ಯಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ತೀರದ ದಂಡೆಯ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ ತಾಲೂಕಿನ ಗ್ರಾಮಸ್ಥರು ಕೂಡಲೆ ಸುರಕ್ಷಿತ ಸ್ಥಳಕ್ಕೆ ತೆರವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೆ 2 ಎನ್.ಡಿ.ಆರ್.ಎಫ್. ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿದೆ. ಇದಲ್ಲದೆ ಎಸ್.ಡಿ.ಅರ್.ಎಫ್., ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ಚಹಿಸುತ್ತಿದ್ದಾರೆ.

ಇದಲ್ಲದೆ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯಕ್ಕೆ ಮತ್ತು ಅತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಅವರು ಮನವಿ ಮಾಡಿದ್ದಾರೆ.

emedialine

Recent Posts

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

4 mins ago

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

8 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

14 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

18 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

21 mins ago

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

5 hours ago