ಸುರಪುರ: ಈಗಾಗಲೆ ಸತತವಾಗಿ ರೈತರಿಗೆ ಮೇಲಿಂದ ಮೇಲೆ ಸಮಸ್ಯೆಗಳು ಎದುರಾಗುತ್ತಿವೆ,ಇದುವರೆಗೆ ಕೊರನಾ ದಿಂದ ಕಂಗೆಟ್ಟಿದ್ದ ರೈತರಿಗೆ ಈಗ ಮಹಾಮಳೆ ದೊಡ್ಡ ನಷ್ಟವನ್ನುಂಟು ಮಾಡಿದೆ.ರೈತರ ಬೆಳೆ ಕಟಾವಿಗೆ ಬಂದಿದ್ದು ನೀರು ಪಾಲಾಗಿದೆ,ಆದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಶೀಘ್ರವೆ ಪರಿಹಾರ ನೀಡುವಂತೆ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಸರಕಾರವನ್ನು ಒತ್ತಾಯಿಸಿದರು.
ನಗರದ ತಹಸೀಲ್ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ರೈತರ ಪರ ಎಂದು ಹೇಳಿದರೆ ಸಾಲದು ಕೂಡಲೆ ರೈತರ ಕಷ್ಟವನ್ನು ಅರಿತುಕೊಂಡು ಪ್ರತಿ ಎಕರೆಗೆ ಕನಿಷ್ಟ ೨೫ ಸಾವಿರ ಪರಿಹಾರ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ರೈತರ ಆತ್ಮ ಹತ್ಯೆಗಳು ಇನ್ನಷ್ಟು ಹೆಚ್ಚಲಿವೆ ಅದಕ್ಕೆ ಸರಕಾರ ಹೋಣೆಯಾಗಲಿದೆ.ಆದ್ದರಿಂದ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ನಮ್ಮ ಪಕ್ಷದಿಂದ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರರಾದ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಹಯ್ಯಾಳಪ್ಪ ಹೊನಕೇರಿ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…