ಶಹಾಬಾದ:ನಗರದಲ್ಲಿ ಶನಿವಾರ ನಡೆದ ತಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಹಾಬಾದ ತಾಲೂಕಿನ ಪ್ರಥಮ ತಾಪಂ ಅಧ್ಯಕ್ಷರಾಗಿ ಹೊನಗುಂಟಾ ತಾಪಂ ಸದಸ್ಯೆ ಸಂಗೀತಾ ದೇವೆಂದ್ರ ಕಾರೊಳ್ಳಿ ಹಾಗೂ ತಾಲೂಕಿನ ಪ್ರಥಮ ತಾಪಂ ಉಪಾಧ್ಯಕ್ಷರಾಗಿ ಭಂಕೂರ ತಾಪಂ ಸದಸ್ಯೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಹಾಬಾದ ತಾಪಂಯಲ್ಲಿ ಕೇವಲ 3 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಕಾಂಗ್ರೆಸ್ನ 2 ಸದಸ್ಯರು, ಬಿಜೆಪಿಯ 1 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ- ಪ್ರವರ್ಗ-ಎ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ- ಅನುಸೂಚಿತ ಜಾತಿ ಮಹಿಳೆಗೆ ಮೀಸಲು ನಿಗದಿಯಾಗಿತ್ತು.
ಬೆಳಿಗ್ಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾದಂತೆ ಸಮಯಕ್ಕೆ ಸರಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ದೇವೆಂದ್ರ ಕಾರೊಳ್ಳಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ ನಾಮಪತ್ರ ಸಲ್ಲಿಸಿದರು. ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಇವರಿಬ್ಬರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ ಸೇಡಂ ಎಸಿ ರಮೇಶ ಕೋಲಾರ ಘೋಷಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಗೀತಾ ಕಾರೊಳ್ಳಿ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಭಂಕೂರ ತಾಪಂ ಸದಸ್ಯೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ ಆಯ್ಕೆಯಾಗಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…