ಬಿಸಿ ಬಿಸಿ ಸುದ್ದಿ

ಪ್ರವಾಹ ಪೀಡಿತರಿಗೆ ಯುವ ಮೋರ್ಚಾ ಮೂಲಭೂತ ಸೌಕರ್ಯಗಳ ವ್ಯವಸ್ಥೆ

ಕಲಬುರಗಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಡಾ. ಸಂದೀಪ್ ಕುಮಾರ್ ಕೆ ಸಿ ಯವರ ಸೂಚನೆ ಮೇರೆಗೆ ಕಲಬುರ್ಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾ ಉಪಾಧ್ಯಕ್ಷರಾದ ಶಿವ ಅಷ್ಠಗಿ ನೇತೃತ್ವದಲ್ಲಿ, ಪ್ರಧಾನ ಕಾರ್ಯದರ್ಶಿಯಾದ ವೀರೇಂದ್ರ ಪಾಟೀಲ ರಾಯಕೋಡ ಜೊತೆಗೂಡಿ ಪ್ರವಾಹ ಪೀಡಿತ ಪ್ರದೇಶ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂಕಷ್ಟಕೊಳಗಾದ ಜನರು ಅಹವಾಲು ಕೇಳಿ ವ್ಯವಸ್ಥೆಯನ್ನು ಪರಿಶೀಲಿಸಿದರು.

ಅಲ್ಲಿನ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಊಟದ ವ್ಯವಸ್ಥೆ ಮತ್ತು ಇತರೆ ಪ್ರಮುಖ ಸಮಸ್ಯೆಗಳ ಬಗ್ಗೆ ಕಮಲಾಪುರ ತಹಸೀಲ್ದಾರರಾದ ಅಂಜುಮ ತಬಸುಮ್ ರವರ ಜೊತೆ ಮಾಡನಾಡಿದರು.

ಸ್ಥಳದಲ್ಲಿದ್ದ ಗ್ರಾಮ ಪಂಚಾಯತ್ ಪಿಡಿಯೋ ರವರಿಗೆ ಶೌಚಾಲಯ ವ್ಯವಸ್ಥೆ ಮಾಡುವಂತೆ ತಿಳಿಸಿದಾಗ ಕೂಡಲೆ ೨ ಶೌಚಾಲಯದ ವ್ಯವಸ್ಥೆ ಮಾಡಿದರು.

ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದರು.
ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಮತ್ತು ಬಿ ಎಸ್ ಯಡಿಯೂರಪ್ಪ ರವರ ನೇತೃತ್ವದ ರಾಜ್ಯ ಸರ್ಕಾರ ಪ್ರವಾಹ ಪೀಡಿತ ಜನರೊಂದಿಗಿದೆ ಮತ್ತು ಗ್ರಾಮೀಣ ಶಾಸಕ ಬಸವರಾಜ ಮತ್ತಿಮುಡ ರವರು ಕ್ಷೇತ್ರದ ಜನರೊಂದಿಗಿದ್ದಾರೆ ಎಂದು ಮನೆ ಕಳೆದುಕೊಂಡು ನಿರಾಶ್ರಿತರಾದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕಾರಿಣಿ ಸದಸ್ಯರಾದ ಮೇಘರಾಜ್ ಅರಳಿ, ಬಿಜೆಪಿ ಯುವ ಮುಖಂಡರಾದ ರೇವಣಸಿದ್ದ ಬಡಾ, ಎಲಿಯಾಸ್ ಪಟೇಲ್, ಅಮೃತ್ ಸಾಗರ್, ದೇಶಮುಖ್ ಬಸವಣ್ಣನವರ, ಗಣೇಶ ಮಲಖೇಡ್, ಅಭಿಲಾಶ್ ಮದಿನಕರ್,ಬಸವರಾಜ್ ತಳವಾರ್,ಶಿವಲಿಂಗ ಸರಸಂಬಿ ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಇದ್ದರು.

ಬಿಜೆಪಿ ಜಿಲ್ಲಾ ಯುವ ಘಟಕದ ವತಿಯಿಂದ ಕುರಕೋಟಾ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಕುರಿತು ಚರ್ಚಿಸಿದ ನಂತರ ತಹಸಿಲ್ದಾರರನ್ನು ಸಂಪರ್ಕಿಸಿದಾಗ ಎರಡು ಶೌಚಾಲಯ ನಿರ್ಮಿಸಲು ಕ್ರಮ ಕೈಗೊಂಡರು.ಉಳಿದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಲು ಕೋರಲಾಯಿತು. -ಶಿವ ಅಷ್ಠಗಿ,ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರು.
emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago