ಬಿಸಿ ಬಿಸಿ ಸುದ್ದಿ

ಈದ್ ಮಿಲಾದ್ ಹಬ್ಬದ ಸಾಮೂಹಿಕ ಮೆರವಣಿಗೆ (ಜುಲೂಸ್) ನಿಷೇಧ

ಕಲಬುರಗಿ: ಇದೇ ಅಕ್ಟೋಬರ್ 30ರಂದು ಆಚರಿಸಲಾಗುತ್ತಿರುವ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್) ಹಾಗೂ ತೆರೆದ ಸ್ಥಳಗಳಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿ ಹಜರತ್ ಅಲಿ ನದಾಫ್ ಅವರು ತಿಳಿಸಿದ್ದಾರೆ.

ಮೋಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಭೆ-ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಸೀದಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಪಾಲನೆ ಮಾಡಬೇಕು.

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು / ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ. ಮುಖಗವಸು (ಮಾಸ್ಕ್)ಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಈ ಹಬ್ಬ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು.

ಕಡ್ಡಾಯವಾಗಿ ವೈಯಕ್ತಿಕವಾಗಿ ಎಲ್ಲರೂ 6 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಖಬರಸ್ತಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ. ಈ ಕುರಿತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆ ಹಾಗೂ ಕೋವಿಡ್-19ರ ಶಿಷ್ಠಾಚಾರವನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಸರ್ಕಾರವು ಈ ಆದೇಶ ಹೊರಡಿಸಿದೆ.

ವಕ್ಫ್ ಸಂಸ್ಥೆಗಳ ಆಡಳಿತ ಮಂಡಳಿ, ಮುತ್ತವಲ್ಲಿ ಹಾಗೂ ಆಡಳಿತಾಧಿಕಾರಿಗಳು ಈದ್ ಮೀಲಾದ್ ಆಚರಣೆ ಸಂದರ್ಭದಲ್ಲಿ ಮೇಲ್ಕಂಡ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago