ಬಿಸಿ ಬಿಸಿ ಸುದ್ದಿ

ಅಪರಾಧ ಮಾಡಿ ಜೈಲು ಶಿಕ್ಷೆ ಅನುಭವಿಸಿದವರಿಗೆ 10 ಸಾವಿರ ದಂಡ ವಿಧಿಸಿ ಬಿಡುಗಡೆ

ಸುರಪುರ: ಸಜಾ ಬಂದಿ ಅಪರಾಧಿಗಳಿಬ್ಬರಿಗೆ ಸನ್ನಡತೆ ಆಧಾರದ ಮೇಲೆ ತಲಾ ೧೦ ಸಾವಿರ ರೂಪಾಯಿಗಳ ದಂಡ ವಿಧಿಸಿ ಬಿಡುಗಡೆ ಮಾಡಿದ ತೀರ್ಪೊಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ನೀಡಿದ್ದಾರೆ.

ತಾಲೂಕಿನ ದೇವರ ಗೋನಾಲ ಗ್ರಾಮದ ನಿಂಗಯ್ಯ ಯಮನಪ್ಪ ಹಾಗು ಹಣಮಥ ಭಾಗಣ್ಣ ಎಂಬ ಇಬ್ಬರು ಸಜಾ ಬಂದಿ ಅಪರಾಧಿಗಳು ೨೦೧೫ರಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಸಲಿಕೆಯಿಂದ ಹೊಡೆದು ಗಾಯಗೊಳಿಸಿದ್ದ ಆರೋಪಕ್ಕೆ ಸಂಬಂದಪಟ್ಟಂತೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿತರ ವಿರುದ್ದ ಆರೋಪ ಸಾಬೀತಾಗಿ ಶಿಕ್ಷೆ ಪ್ರಕಟಿಸಲಾಗಿತ್ತು.

ಈಗ ನ್ಯಾಯಧೀಶರಾದ ಚಿದಾನಂದ ಬಡಿಗೇರ ಅವರು ಅಪರಾಧಿ ಪರೀವೀಕ್ಷಣಾ ಅಧಿನಿಯಮ ಕಲಂ ೪ ರಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿ ಸನ್ನಡತೆ ಆಧಾರದ ಮೇಲೆ ಆರೋಪಿಗಳನ್ನು ಬಿಡುಗಡೆ ಗೊಳಿಸಿದ್ದು,ಇಬ್ಬರು ಅಪರಧಿಗಳಿಗೆ ತಲಾ ೧೦ ಸಾವಿರ ದಂಡ ವಿಧಿಸಿ ಎರಡು ವರ್ಷಗಳವರೆಗೆ ಯಾವುದೇ ಅಪರಾಧಿಕ ಕೃತ್ಯದಲ್ಲಿ ಭಾಗವಹಿಸದಂತೆ ಷರತ್ತು ವಿಧಿಸಿ ತೀರ್ಪು ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

42 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago