ಚಿಕ್ಕಮಗಳೂರು : ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ನಗರದ ಆಜಾದ್ ಪಾರ್ಕ್ ವ್ರತ್ತದಲ್ಲಿ ಸಮಾವೇಶಗೊಂಡ SDPI ಕಾರ್ಯಕರ್ತರು ನಗರಸಭೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ SDPI ಜಿಲ್ಲಾಧ್ಯಕ್ಷರಾದ ಅಜ್ಮತ್ ಪಾಷ ರವರು ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಂದ ತೆರಿಗೆ ವಸೂಲಿ ಮಾಡಲಾಗುತ್ತಿದೆ, ಆದರೆ ತೆರಿಗೆ ಹಣವನ್ನು ಅಭಿವೃಧ್ಧಿ ಕಾರ್ಯಗಳಿಗೆ ವಿನಿಯೋಗಿಸದೆ ಸಾರ್ವಜನಿಕರನ್ನು ವಂಚಿಸಲಾಗುತ್ತಿದೆ, ನಗರಸಭೆ ಸಾರ್ವಜನಿಕರಿಗೆ ಅಗತ್ಯ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಬಲವಾಗಿ ಮುಂದಿರಿಸಿ ಸರ್ಕಾರ ವನ್ನು ಎಚ್ಚರಿಸಬೇಕಾದ ವಿರೋಧ ಪಕ್ಷಗಳು ಆಡಳಿತ ಪಕ್ಷದೊಂದಿಗೆ ಹೊಂದಾಣಿಕೆ ರಾಜಕೀಯ ಮಾಡುತ್ತಿದೆ ಎಂದರು.ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಸಂಬಂಧ ಪಟ್ಟ ಇಲಾಖೆ ಶೀಘ್ರದಲ್ಲೇ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳು ಒಟ್ಟು ಗೂಡಿ ಬೃಹತ್ ಹೋರಾಟ ನಡೆಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಜ್ಮತ್ ಪಾಷ, ಕಾರ್ಯದರ್ಶಿ ಮೊಹ್ಸೀನ್ ಪಿಎಫ್ಐ ವಲಯ ಕಾರ್ಯದರ್ಶಿ ಮುಬಾರಕ್, ಎಸ್ಡಿಪಿಐ ಜಿಲ್ಲಾ ನಾಯಕರಾದ ತನ್ವೀರ್, ಮುನೀರ್, ಸಾರ್ವಜನಿಕರು ಹಾಗು ಎಸ್ಡಿಪಿಐ ಕಾರ್ಯಕರ್ತರು, ಉಪಸ್ಥಿತರಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…