ಕಲಬುರಗಿ: ಸಿಪಿಐ (ಎಂ) ಹಿರಿಯ ಧುರೀಣ, ಹೋರಾಟಗಾರ ಮಾರುತಿ ಮಾನ್ಪಡೆ (65) ಮಂಗಳವಾರ ಬೆಳಗ್ಗೆ 9.30ಕ್ಕೆ ನಿಧರಾಗಿದ್ದಾರೆ.
ಜಿಲ್ಲೆಯ ರೈತಾಪಿ ವರ್ಗ, ಕೃಷಿ, ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಲೇ ಕಾರ್ಮಿಕ ಧ್ವನಿಯಾಗಿ ಬೆಳೆದು ಬಂದಿದ್ದರು.
ಕೆಲವು ದಿನಗಳ ಹಿಂದೆ ಕೊರೊನಾ ಪಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ್ಗೆ ಮೂರ್ನಾಲ್ಕು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತ ಬಂದಿತು. ಕೊನೆಗೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರರರು ಹಾಗೂ ಅಪಾರ ಬಂಧು ಬಳಗ ಇದೆ. ಇವರ ನಿಧನದಿಂದಾಗಿ ಹೋರಾಟದ ಧ್ವನಿ ಅಡಗಿದಂತಾಯಿತು ಎಂದು ಸಿಪಿಐ(ಎಂ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.
ಕಮಲಾಪುರ ತಾಲೂಕಿನ ಲೆಂಗಟಿ ಗ್ರಾಮದಲ್ಲಿ ಅಂತ್ಯ ಕ್ರಿಯೆ ನೆರವೆರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…