ಬಡ ಮಹಿಳೆಯರಿಗೆ ಕಂಪ್ಯೂಟರ್-ಹೊಲಿಗೆ ಉಚಿತ ತರಬೇತಿ ಕಾರ್ಯಕ್ರಮ

0
35

ಕಲಬುರಗಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಹಾಗೂ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ೬೦ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಕಂಪ್ಯೂಟರ್ ಹಾಗೂ ಹೊಲಿಗೆ ಉಚಿತ ತರಬೇತಿ ನೀಡಿ ಸೋಮವಾರ ಪ್ರಮಾಣ ಪತ್ರ ವಿತರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಹರ್ಸಲ್ ತಲಸ್ಕರ್, ಬಡ ಮಹಿಳೆಯರಿಗೆ ಉಚಿತ ತರಬೇತಿ ನೀಡುತ್ತಿರುವ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.

Contact Your\'s Advertisement; 9902492681

ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಅಧ್ಯಕ್ಷ ಬಸವರಾಜ ಹರವಾಳ ಪ್ರಾಸ್ತಾವಿಕ ಮಾತನಾಡಿ, ನಮ್ಮ ಸಂಸ್ಥೆಯೂ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿದ್ದು, ಇದಕ್ಕೂ ಮುಂಚೆ ೫೦ ಜನ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಪ್ರಸ್ತುತ ಕಂಪ್ಯೂಟರ್ ತರಬೇತಿ ನೀಡಿ ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ಅವಕಾಶ ಮಾಡಿಕೊಡಲಾಗಿದೆ ಎಂದರು.

ನೆಹರು ಯುವಕೇಂದ್ರದ ಅಧಿಕಾರಿ ಸಿದ್ರಾಮಪ್ಪ ಮಾಳ, ರಾಜ್ಯ ಟೋಕರೆ ಕಬ್ಬಲಿಗ ಸಮಾಜದ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಸರಡಗಿ, ಶಿಕ್ಷಕರಿ ಶ್ರೀದೇವಿ, ರಾಜೇಶ್ವರಿ ಬಸವರಾಜ, ಮಹಾಂತೇಶ ರಂಜಣಗಿ,ಎಂ.ಎಂ. ಶಿರಹಟ್ಟಿ, ರೇವಣಸಿದ್ದಪ್ಪ ಹಲಚೇರಿಕ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here