ಬಿಸಿ ಬಿಸಿ ಸುದ್ದಿ

ವೀರಪ್ಪ ನಿಷ್ಠಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ,ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ವನ್ನು ಕಾಲೇಜಿನ ರಾಷ್ಠ್ರೀಯ ಸೇವಾ ಯೋಜನೆ ಘಟಕ ಮತ್ತು ವಲಯ ಅರಣ್ಯ ಇಲಾಖೆ, ಸುರಪುರಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಪ ವಲಯ ಅರಣ್ಯಾಧಿಕಾರಿ ಶರಣಪ್ಪ ಕುಂಬಾರ ಮಾತನಾಡಿ,ಪ್ರತಿ ಕುಟುಂಬಕ್ಕೆ ಒಬ್ಬ ಮಗುವು ಎಷ್ಟು ಮುಖ್ಯವೊ ಅದರಂತೆ ಪ್ರತಿ ಮಗುವಿಗು ಒಂದು ಮರ ಮುಖ್ಯವೆಂದು ಭಾವಿಸಿ ಮಕ್ಕಳಿಗೆ ಮರ ಬೆಳೆಸುವ ಬಗ್ಗೆ ಪೋಷಕರು ಅರಿವು ಮೂಡಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಶುಂಪಾಲ ಡಾ. ರವೀಂದ್ರಕುಮಾರ ಎಮ್. ನಾಗರಾಳೆ ಮಾತನಾಡಿ, ಇಂದು ಜನರಲ್ಲಿ ಪರಿಸರದ ಕಾಳಜಿ ತುಂಬಾ ಕಡಿಮೆಯಾಗಿದೆ.ಮರ ಬೆಲೆಸುವ,ಮರ ಉಳಿಸುವ ಬಗ್ಗೆ ಅರಿವಿನ ಕೊರತೆಯಿದೆ, ಹೀಗೆ ಸಾಗಿದರೆ ಮುಂದೊಮ್ಮೆ ಮಳೆ,ಬೆಳೆ,ಶುಧ್ಧ ಗಾಳಿ ಇಲ್ಲದೆ ಜನರು ಜೀವಂತ ಶವವಾಗಿ ನರಳಬೇಕಾಗಲಿದೆ.ಆದ್ದರಿಂದ ಎಲ್ಲರು ಒಂದೊಂದು ಮರವನ್ನು ನಮ್ಮ ಕರ್ತವ್ಯವೆಂದು ಭಾವಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಶ್ವ ಪರಿಸರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ- ವಿದ್ಯಾರ್ಥಿಗಳೆಲ್ಲರಿಗು ಸಸಿ ನೆಡಲು ಪ್ರೆರೆಪಿಸಲಾಯಿತು. ಸ್ವಯಂ ಪ್ರೇರಿತರಾದ ಎಲ್ಲರು ಕಾಲೇಜಿನ ಆವರಣದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು
ಪ್ರೋ ಕೈಲಾಸ್ ಪಾಟೀಲ್,ಡಾ:ಅಶೋಕ ಪಾಟೀಲ್,ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕರಾದಪ್ರೋ ಪ್ರಭಾಕರ ಪಾಟೀಲ್ ಮತ್ತು ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗು ವಿದ್ಯಾರ್ಥಿಗಳಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago