ಬಿಸಿ ಬಿಸಿ ಸುದ್ದಿ

ಮುಂದಿನ ಮೂರು ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿ: ಬಿಜೆಪಿ ಅಧ್ಯಕ್ಷ ಕಟೀಲ್

ಸುರಪುರ: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪ್ರವಾಹ ಪರಸ್ಥಿತಿ ವೀಕ್ಷಣೆಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗು ಸಂಸದ ನಳಿನಕುಮಾರ ಕಟೀಲ್ ಅವರು ಸುರಪುರಕ್ಕೆ ಭೇಟಿ ನೀಡಿದರು.

ನಗರದ ಬಿಜೆಪಿ ಕಚೇರಿ ಹಾಗು ಶಾಸಕರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎಲ್ಲವೂ ಬರೀ ಊಹಾಪೋಹಗಳಾಗಿವೆ ಎಂದು ಬಿಜೆ ಸ್ಪಷ್ಟಪಡಿಸಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೀಡಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿ ಯಾವುದೇ ಕಾರಣಕ್ಕೂ ಯಡಿಯೂರಪ್ಪನವರ ಬದಲಾವಣೆ ಇಲ್ಲ,ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತ್ನಾಳ ಮಾತನ್ನು ಅಲ್ಲಗಳೆದರು. ಈಗಾಗಲೆ ಪ್ರವಾಹ ಸ್ಥಳಗಳನ್ನು ವೀಕ್ಷಣೆ ಮಾಡಿ ಬಂದಿರುವೆ,ನೆರೆಯಿಂದ ತೊಂದರೆಗೊಳಗಾದ ಎಲ್ಲರ ನೆರವಿಗೆ ಸರಕಾರವಿದೆ.ಸಂತ್ರಸ್ತರಿಗೆ ಅಗತ್ಯ ಸೌಲಭ್ಯವನ್ನು ಸರಕಾರ ಮಾಡಲಿದೆ,ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಪರಿಹಾರವಾಗಿ ೧೦ ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ಹಾಕಲಾಗುತ್ತಿದೆ.ಕೇಂದ್ರ ಸರಕಾರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ,ಹಿಂದೆ ಸಿದ್ರಾಮಣ್ಣನವರ ಸರಕಾರವಿದ್ದಾಗ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ ಎಂದು ಒಮ್ಮೆ ನೋಡಿಕೊಳ್ಳಲಿ ಎಂದು ಸಿದ್ರಾಮಯ್ಯನವರ ಹೇಳಿಕೆಗೆ ಟಾಂಗ್ ನೀಡಿದರು.

ಪರಿಶಿಷ್ಟ ಪಂಗಡಕ್ಕೆ ೭.೫ ಮೀಸಲಾತಿ ಪ್ರಮಾಣ ಹೆಚ್ಚಳದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾನೂನಿನ ಅಡಿಯಲ್ಲಿ ಏನು ಮಾಡಲು ಸಾಧ್ಯವಿದೆ ಅದನ್ನು ಸರಕಾರ ಮಾಡಲಿದೆ ಎಂದರು.ಶಾಸಕರು ಮೀಸಲಾತಿ ಹೆಚ್ಚಳಕ್ಕಾಗಿ ರಾಜೀನಾಮೆ ನೀಡಲು ಸಿದ್ಧ ಎನ್ನುತ್ತಾರೆ ಎಂದಾಗಿ ಯಾವುದೇ ಉತ್ತರ ನೀಡದೆ ಮುಗಳ್ನಗೆಯಿಂದ ಜಾರಿಕೊಂಡರು.ಅಲ್ಲದೆ ಶ್ರೀರಾಮುಲು ಅವರು ನ್ಮಮ ಪಕ್ಷದ ದೊಡ್ಡ ನಾಯಕರು ಅವರು ಬಯಸಿದಂತೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ ಹಾಗು ರಾಜುಗೌಡರು ತಮಗೆ ಸಿಕ್ಕ ಜವಬ್ದಾರಿಯಲ್ಲಿ ಉತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನಳೀನಕುಮಾರ್ ಕಟೀಲ್ ಅವರಿಗೆ ಅನೇಕ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ ಸೇಡಂ ಶಾಸಕ ರಾಜಕುಮಾರ ಪಾಟೀಲ್ ಬಿಜೆಪಿ ಜಿಲ್ಲಾಧ್ಯಕ್ಷ ಶರಣಭೂಪಾಲ ರಡ್ಡಿ ಸ್ಥಳಿಯ ಮುಖಂಡರಾದ ರಾಜಾ ಹನಮಪ್ಪ ನಾಯಕ (ತಾತಾ) ಹೆಚ್.ಸಿ ಪಾಟೀಲ್ ಬಸನಗೌಡ ಹಳ್ಳಿಕೋಟೆ ಭೀಮಾಶಂಕರ ಬಿಲ್ಲವ್ ದೇವರಾಜ ನಾಯಕ ರಂಗನಗೌಡ ದೇವಿಕೇರಾ ಶ್ರೀನಿವಾಸ ನಾಯಕ ದರಬಾರಿ ದೊಡ್ಡದೆಸಾಯಿ ದೇವರಗೋನಾಳ ಸಣ್ಣ ದೇಸಾಯಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

3 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

14 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago