ಬಿಸಿ ಬಿಸಿ ಸುದ್ದಿ

ಶಹಾಪುರ: 25 ರಂದು ಬೆಳಕಹನಿ ಕೃತಿ ಲೋಕಾರ್ಪಣೆ

ಶಹಾಪುರ: ಯುವ ಸಾಹಿತಿ ಹಾಗೂ ಶಿಕ್ಷಕ ಶ್ರೀ ಜ್ಯೋತಿ ನಾಯ್ಕ ರಚಿಸಿದ ಬೆಳಕಹನಿ ಕೃತಿ ಇದೇ ತಿಂಗಳು 25 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಕಸಾಪ ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ ಪ್ರಕಟಣೆಗೆ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10:30 ಕ್ಕೆ ಬೆಳಕಹನಿ ಕೃತಿ ಬಿಡುಗಡೆ ಹಾಗೂ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಅಬಕಾರಿ ಡಿವೈಎಸ್ಪಿ ಶ್ರೀರಾಮ್ ಬಿ. ರಾಠೋಡ ಉದ್ಘಾಟಿಸಲಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ಕೃತಿ ಬಿಡುಗಡೆಗೊಳಿಸಲಿದ್ದಾರೆ.ಖ್ಯಾತ ಕಥೆಗಾರ ಹಿರಿಯ ಸಾಹಿತಿ ಸಿದ್ಧರಾಮ ಹೊನ್ಕಲ್ ಈ ಕೃತಿಯ ಕುರಿತು ಮಾತನಾಡಲಿದ್ದಾರೆ.ನಂತರ ಜರುಗುವ ಕವಿಗೋಷ್ಠಿ ಅಧ್ಯಕ್ಷತೆಯನ್ನು ಯುವಸಾಹಿತಿ ಬಂಡಾಯ ಬರಹಗಾರರು ಡಾ.ಗಾಳೆಪ್ಪ ಪೂಜಾರಿ ವಹಿಸಿಕೊಳ್ಳಲಿದ್ದಾರೆ.

ಕಲಬುರಗಿ ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರುದ್ರಗೌಡ ಪಾಟೀಲ್,ರೇಖು ಚವ್ಹಾಣ,ಡಾ:ಜಗದೀಶ್ ಉಪ್ಪಿನ್,ಸಾಹಿತಿ ಸುರೇಶ ಕಂಬಳಿ,ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಸುಮಾರು 20 ಕ್ಕೂ ಹೆಚ್ಚು ಯುವ ಕವಿಗಳು ಭಾಗವಹಿಸಿ ತಮ್ಮ ಸ್ವರಚಿತ ಕವನ ವಾಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

emedialine

View Comments

Recent Posts

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

22 seconds ago

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

18 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

20 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

32 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago