ಬಿಸಿ ಬಿಸಿ ಸುದ್ದಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಸಂಸದ ಡಾ. ಜಾಧವ ಭೇಟಿ

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಉಮೇಶ ಜಾಧವ ಅವರು ಗುರುವಾರ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ ಬಂದಿರುವ ಅನುದಾನದ ಹಾಗೂ ಅದರ ಸದ್ಬಳಕೆ, ಅಕಾಡೆಮಿಕ್ ಚಟುವಟಿಕೆಗಳು ಮತ್ತು ವಿಶ್ವವಿದ್ಯಾಲಯದ ಕುಂದುಕೊರತೆಗಳ ಕುರಿತು ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಹೆಚ್.ಎಂ. ಮಹೇಶ್ವರಯ್ಯ ಅವರಿಂದ ಮಾಹಿತಿ ಪಡೆದ ಅವರು ಕೇಂದ್ರ ಸರ್ಕಾರದ ಅನುದಾನವನ್ನು ಇಲ್ಲಿ ಸಮರ್ಪಕವಾಗಿ ವಿನಿಯೋಗಿಸುತ್ತಿರುವುದಕ್ಕೆ ಸಂತಸಪಟ್ಟರು.

ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ ಅವರು ಮಾತನಾಡಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆಯಿಂದಲು ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ೨೫ ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರು ಶೇಖರಣೆ ಘಟಕ ವಿವಿ ಕ್ಯಾಂಪಸ್‌ನಲ್ಲಿ ಸ್ಥಾಪಿಸಲಾಗಿದೆ. ವಿಶ್ವವಿದ್ಯಾಲಯಕ್ಕೆ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಮತ್ತು ಶಾಶ್ವತ ಪರಿಹಾರಕ್ಕೆ ಅಮರ್ಜಾ ಆಣೆಕಟ್ಟಿನಿಂದ ನೀರು ಪೂರೈಕೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಮುಂದಿನ ಒಂದು ತಿಂಗಳ ಒಳಗಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಇಲ್ಲಿನ ಉನ್ನತ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಚುನಾಯಿತ ಜನಪ್ರತಿನಿಧಿಗಳಿಗೆ ಶೈಕ್ಷಣಿಕ ಸಮಾವೇಶ ಏರ್ಪಡಿಸಿ, ಬಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ.ಜಿ.ಆರ್.ನಾಯಕ್, ಆಳಂದ ಶಾಸಕ ಸುಭಾಷ ವ್ಹಿ. ಗುತ್ತೇದಾರ, ವಿಧಾನಸಭೆಯ ಮಾಜಿ ಶಾಸಕರಾದ ಅರುಣಾ ಪಾಟೀಲ ರೇವೂರ, ವಾಲ್ಮಿಕಿ ನಾಯಕ್, ವಿಶ್ವನಾಥ ಪಾಟೀಲ ಹೆಬ್ಬಾಳ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago