ಸಾಂಕ್ರಾಮಿಕ ರೋಗ ಹರಡಂತೆ ಜಿಲ್ಲಾಡಳಿತ ಕ್ರಮ: ತಾಜಾ ಆಹಾರ, ನೀರು ಕುದಿಸಿ ಆರಿಸಿದ ಕುಡಿಯಲು ಸಲಹೆ

0
100

ಕಲಬುರಗಿ: ನೆರೆಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು,  ಕುಡಿಯುವ ನೀರನ್ನು ಕುದಿಸಿ ಆರಿಸಿ ಕುಡಿಯಬೇಕು ಹಾಗೂ ತಾಜಾ ಆಹಾರ ಪದಾರ್ಥಗಳನ್ನು ಸೇವಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಸಲಹೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಕುರಿತು ಚರ್ಚಿಸಲು ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಸಾಂಕ್ರಾಮಿಕ ರೋಗಗಳ ತಡೆಯುವ ಕುರಿತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜನತೆಗೆ ಡಂಗೂರ ಸಾರಿಸಿ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Contact Your\'s Advertisement; 9902492681

ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯತ್, ಗ್ರಾಮೀಣ ಮತ್ತು ನಗರ ಕುಡಿಯುವ ನೀರು ವಿಭಾಗ, ಮಹಾನಗರ ನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರವಾಹ ಮತ್ತು ಮಳೆಯಿಂದ ನೀರು ಹರಿದು ಹಾನಿಯಾಗಿರುವ ಪೈಪ್‍ಲೈನ್ ಸರಿಪಡಿಸಿ, ಸಮರ್ಪಕವಾಗಿ ಜನರಿಗೆ ಕುಡಿಯಲು ನೀರು ಪೂರೈಕೆ ಮಾಡಬೇಕು ಅಧಿಕಾರಿಗಳಿಗೆ ಹೇಳಿದರು.

ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇಂತಹ ನೀರಿರುವ ಜಾಗಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪರಣೆ ಹಾಗೂ ಪಾಂಗಿಂಗ್ ಮಾಡುವ ಮೂಲಕ ಸೊಳ್ಳೆಗಳ ಉತ್ಪತ್ತಿಯಾಗದಂತೆ ತಡೆಯಬೇಕು ಎಂದು ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪಿ. ನಂದಗಿರಿ ಅವರು ಮಾತನಾಡಿ, ಜಾಕ್‍ವೆಲ್‍ಗಳು ನೀರಿನಲ್ಲಿ ಮುಳುಗಿದ್ದು, ಶಹಾಬಾದ್, ವಾಡಿ ಮುಂತಾದ ಪಟ್ಟಣಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ ಆವರು ಮಾತನಾಡಿ, ಆರೋಗ್ಯ ಶಿಬಿರಗಳನ್ನು ತೆರೆಯುವ ಮೂಲಕ ಪ್ರವಾಹ ಸಂತ್ರಸ್ತರ ಆರೋಗ್ಯ ತಪಾಸಣೆ ಮಾಡಬೇಕು. ಪ್ರಸಕ್ತ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ್ ಎಸ್. ಮಾಲಿ, ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ್, ಪ್ಯಾಥಾಲಜಿಸ್ಟ್ ಡಾ. ಚಂದ್ರಮೌಳಿ ಸೇರಿದಂತೆ ಸಂಬಂಧಪಟ್ಟದ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here