ಬಿಸಿ ಬಿಸಿ ಸುದ್ದಿ

ಬೀದಿ ನಾಟಕ ಕಲಾ ತಂಡಗಳಿಂದ ಆರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನೆ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಮೂಲಕ ಜನಜಾಗೃತಿ ಮೂಡಿಸಲು ಅರ್ಹ ಕಲಬುರಗಿ ಜಿಲ್ಲೆಯ ಆಸಕ್ತಿಯುಳ್ಳ ನೋಂದಾಯಿತ ಬೀದಿ ನಾಟಕ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಕೆ. ಪಾಟೀಲ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಕಲಾ ತಂಡದಲ್ಲಿ ಕನಿಷ್ಠ 8 ಜನ ಕಲಾವಿದರ ಇರಬೇಕು. ಈ ಪೈಕಿ 3 ಜನ ಮಹಿಳಾ ಕಲಾವಿದರು ಇರುವುದು ಕಡ್ಡಾಯ. ಕಲಾ ತಂಡವು ಕಲಬುರಗಿ ಜಿಲ್ಲೆಯವರಾಗಿರಬೇಕು. ಜಿಲ್ಲೆಗೆ ಈ ಕಾರ್ಯಕ್ರಮಕ್ಕಾಗಿ 3 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ಆಸಕ್ತಿಯುಳ್ಳ ಅರ್ಹ ಬೀದಿ ನಾಟಕ ತಂಡಗಳು ತಮ್ಮ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವ ಕುರಿತ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಐಇಸಿ ವಿಭಾಗದಲ್ಲಿ 2019ರ ಜೂನ್ 12ರೊಳಗಾಗಿ ಸಲ್ಲಿಸಬೇಕು.

ಕಲಬುರಗಿಯ ಹಳೆಯ ಆಸ್ಪತ್ರೆ ಆವರಣದಲ್ಲಿರುವ ಹೆಚ್.ಐ.ಟಿ. ಸಭಾಂಗಣದಲ್ಲಿ 2019ರ ಜೂನ್ 14 ರಂದು ಬೆಳಿಗ್ಗೆ 10.30 ಗಂಟೆಗೆ ತಂಡಗಳ ಆಯ್ಕೆ ಪ್ರಕ್ರಿಯೇ ನಡೆಯಲಿದೆ. ಆಯ್ಕೆ ಪ್ರಕ್ರಿಯೇಗೆ ಬರುವ ಕಲಾ ತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೇಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದ ಸಮಿತಿಯು ಮೂರು ತಂಡಗಳನ್ನು ಆಯ್ಕೆ ಮಾಡಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago