ಬಿಸಿ ಬಿಸಿ ಸುದ್ದಿ

ಪಂಚಮಸಾಲಿ ಸಮಾಜ 2 ಎ ಗೆ ಸೇರಿಸಲು ಬೆಳಗಾವಿ ಸುವರ್ಣ ಸೌಧ ಚಲೋ.

ಜೇವರ್ಗಿ: ಮೂಲತಃ ಕೃಷಿ ಆಧಾರಿತ ಸಮಾಜ ಪಂಚಮಸಾಲಿ ಸಮಾಜ ಈ ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆ ಹೊಂದಿದ್ದು ಈ ಸಮಾಜವನ್ನು ಸರ್ಕಾರ 2 ಎ ಗೆ ಸೇರಿಸಬೇಕೆಂದು ದಿನಕ್ಕೆ 28 ರಂದು ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರು ಹೇಳಿದರು.

ಜೇವರಗಿ ಷಣ್ಮುಖ ಶಿವಯೋಗಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ದೇಶಿಸಿ ಮಾತನಾಡಿದರು ಕೇವಲ ಪಂಚಮಸಾಲಿ ಸಮಾಜ ಒಂದೇ ಅಲ್ಲ ಅದರಲ್ಲಿ ಬರುವ 101 ಉಪಪಂಗಡಗಳು ಕೂಡ 2 ಎ ಗೆ ಸೇರಿಸಬೇಕೆಂದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಹೇಳಿದರು.

ನಮ್ಮ ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ನ್ಯಾಯ ಕೇಳುತ್ತಿದ್ದೇವೆ ಇದು ಮುಖ್ಯಮಂತ್ರಿಗಳ ಮುಟ್ಟುವವರಿಗೂ ನಾವು ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಬಿ.ಎಸ್.ಯಡಿಯೂರಪ್ಪನವರ ಅವಧಿಯಲ್ಲಿ ನಮ್ಮ ಸಮಾಜ 2 ಎ ಗೆ ಸೇರಿಸಬೇಕು ಎಂಬ ನಮ್ಮ ಮಹದಾಸೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮತ್ತು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಸ್ಕಿ, ಜೇವರ್ಗಿ ಘಟಕದ ಅಧ್ಯಕ್ಷರ ಮಲ್ಲನಗೌಡ ಕುಳಗೇರಿ,ಶಹಾಪುರ ಸಮಾಜದ ಯುವ ಮುಖಂಡರಾದ ದೇವೇಂದ್ರಪ್ಪ ತೋಟಿಗೇರ, ಇತರರು ಉಪಸ್ಥಿತರಿದ್ದರು.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

12 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

15 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

26 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago