ಶಹಾಬಾದ:ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ ತಿಮ್ಮಯ್ಯ ಪುರ್ಲೆ ಅವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಜೆಡಿಎಸ್ ನಗರಾಧ್ಯಕ್ಷ ರಾಜಮಹ್ಮದ್ ರಾಜಾ ಹೇಳಿದರು.
ಅವರು ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ತೆರಳಿ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಪರವಾಗಿ ಮತಯಾಚಿಸಿ ಮಾತನಾಡಿದರು.
ಈಗಾಗಲೇ ಮೂರು ಬಾರಿ ಬಿಜೆಪಿ ಅಭ್ಯರ್ಥಿಗೆ ಗೆಲ್ಲಸಿ ನೋಡಿದ್ದೀರಿ, ಒಂದು ಬಾರಿ ಕಾಂಗ್ರೆಸ್ ಅಭ್ಯರ್ಥಿಗೂ ಗೆಲ್ಲಿಸಿ ನೋಡಿದಿರಿ.ಅವರಿಂದ ಶಿಕ್ಷಕರಿಗೆ ಇರುವಂಥ ನಿರೀಕ್ಷೆಗಳು ಒಂದು ಈಡೇರಿಲ್ಲ.ಆದ್ದರಿಂದ ಶಿಕ್ಷಕರ ಪ್ರತಿನಿಧಿಯಾಗಿ ಒಬ್ಬ ಪ್ರಾಮಾಣಿಕ ಶಿಕ್ಷಕರಿಗೆ ಕಳಿಸಿದರೇ ಶಿಕ್ಷಕರ ಸಮಸ್ಯೆ ಬಗೆಹರಿಯುತ್ತದೆ.ಆದ್ದರಿಂದ ಶಿಕ್ಷಕರ ಕ್ಷೇತ್ರ ಶಿಕ್ಷಕರ ಪಾಲಾಗಬೇಕಾದರೆ ಹಾಗೂ ಶಿಕ್ಷಕರ ಸಮಸ್ಯೆಗಳು ಬಗೆಹರಿಯಬೇಕಾದರೆ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಅವರಿಗೆ ಮತ ಹಾಕಿ ಎಂದು ಶಿಕ್ಷಕರಲ್ಲಿ ಮನವಿ ಮಾಡಿಕೊಂಡರು.
ಸೋಮಶೇಖರ ನಂದಿಧ್ವಜ, ಲೋಹಿತ್ ಕಟ್ಟಿ,ಸುನೀಲ ಚವ್ಹಾಣ, ವಿಜಯಲಕ್ಷ್ಮಿ ಬಂಗರಗಿ, ಅಬ್ದುಲ್ ಜಬ್ಬಾರ, ಯುಸೂಫ ಸಾಹೇಬ, ಹೀರಾಲಾಲ ಪವಾರ, ಶೇಖ ಚಾಂದ್ ವಾಹೀದಿ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…