ಬಿಸಿ ಬಿಸಿ ಸುದ್ದಿ

ಯಡಿಯೂರಪ್ಪನವರ ಮೇಲೆ ವಿಶ್ವಾಸವಿಟ್ಟು ನಮೋಶಿಗೆ ಮತ ನೀಡಿ

ಶಹಾಬಾದ:ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ ಬಿಜೆಪಿ ಅಭ್ಯರ್ಥಿ ಶಶೀಲ ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಎಂದು ಚಿತ್ತಾಪೂರ ಬಿಜೆಪಿ ಮಂಡಲ ಅಧ್ಯಕ್ಷ ನೀಲಕಂಠರಾವ ಪಾಟೀಲ ಭಂಕೂರ ಹೇಳಿದರು.

ಅವರು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ನಿಮಿತ್ತ ನಗರದ ವಿವಿಧ ಪ್ರದೇಶಗಳಿಗೆ ಬೇಟಿ ನೀಡಿ ಶಿಕ್ಷಕರಿಗೆ ನಮೋಶಿ ಅವರಿಗೆ ಮತಯಾಚಿಸುವಂತೆ ಕೋರಿ ಮಾತನಾಡಿದರು.

ಈ ಹಿಂದಿನ ವಿಧಾನ ಪರಿಷತ್ ಸದಸ್ಯ ಯಾರಿಗೂ ಸಿಗದ ಹಾಗೂ ಯಾರ ಕರೆಯನ್ನು ಸ್ವೀಕರಿಸಿಲ್ಲ ಎಂಬ ದೂರು ಬಂದಿವೆ.ಅಲ್ಲದೇ ಯಾವುದೇ ಕಾರ್ಯಗಳು ಅವರಿಂದ ಆಗಿಲ್ಲ. ಈಗ ನಮ್ಮ ಸರಕಾರವಿರುವುದರಿಂದ ಶಶೀಲ ನಮೋಶಿ ಅವರನ್ನು ಗೆಲುವು ಸಾಧಿಸಿದರೇ ಬಹುತೇಖ ಸಮಸ್ಯೆಗಳು ಬಗೆಹರಿಯಲಿವೆ. ಯಡಿಯೂರಪ್ಪನವರು ಸರಕಾರಿ ನೌಕರರ ಹಿತ ಕಾಯುವ ಮುಖ್ಯಮಂತ್ರಿ.ಯಾವತ್ತಿಗೂ ಅವರ ಮೇಲೆ ವಿಶ್ವಾಸವಿಟ್ಟು ಈ ಬಾರಿ ನಮೋಶಿ ಪರ ಮತಚಲಾಯಿಸುವಂತೆ ಮನವಿ ಮಾಡಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಕನಕಪ್ಪ ದಂಡಗುಲಕರ್, ಗೋಪಾಲ ರಾಠೋಡ, ಭರತ ಮುತ್ತಗಾ,ನಗರಸಭೆ ಸದಸ್ಯ ರವಿ ರಾಠೋಡ,ಯಲ್ಲಾಲಿಂಗ ಪೂಜಾರಿ, ಶಿವಪ್ರಕಾಶ ಸೇರಿದಂತೆ ಅನೇಕರು ಹಾಜರಿದ್ದರು.

emedia line

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

11 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago