ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ಶಶೀಲ್’ ನಮೋಶಿಯವರು ನಗರದ ವಿವಿಧ ಶಾಲಾ ಕಾಲೇಜಗಳಲ್ಲಿ ಮತಯಾಚನೆ ಮಾಡಿದರು.
ನಗರದ ಎಂ.ಆರ್, ಮೆಡಿಕಲ್ ಕಾಲೇಜು, ಬಸವೇಶ್ವರ ಆಸ್ಪತ್ರೆ, ಶಾರದಾ ಕಾಲೇಜುಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಭಾಗದ ಶೈಕ್ಷಣಿಕ ಪ್ರಗತಿಯೇ ನನ್ನ ಕನಸಾಗಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕರ ಉಳಿದ ಸಮಸ್ಯೆಗಳನ್ನುಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಮೋಶಿಯವರಿಗಿಂತ ಸೂಕ್ತ ವ್ಯಕ್ತಿ ಮತ್ತೊಬರಿಲ್ಲ. ನಮ್ಮ ಭಾಗದ ಎಲ್ಲ ಶಿಕ್ಷಕರು ಮತವನ್ನು ನೀಡಿ ಪ್ರಚಂಡ ಬಹುಮತದಿಂದ ಆರಿಸಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಆಧ್ಯಕ್ಷರಾದ ಸಿದ್ಧಾಜಿ ಪಾಟೀಲ. ರಮೇಶ ಕಡಾಳೆ, ಶಾಂತವೀರ ಬಡಿಗೇರ ಇನ್ನಿತರರು ಉಪಸ್ಥಿತರಿದ್ದರು.