ಕಲಬುರಗಿ: ಪ್ರತಿವರ್ಷ ಲಕ್ಷಾಂತರ ಜನರು ಭಾಗವಹಿಸಿ ಭಕ್ತಿ ಹಾಗೂ ಶ್ರದ್ಧೆಗಳಿಂದ ನಡೆಸಲಾಗುತ್ತಿರುವ ಜೇವರ್ಗಿಯ ಆದಿಶಕ್ತಿ ಎಂದೇ ಹೆಸರು ಪಡೆದಿರುವ ಮಹಾಲಕ್ಷ್ಮಿ ದೇವಿಯ( ಕಲ್ಕತ್ತಾ ದೇವಿ) ಜಾತ್ರೆಯನ್ನು ಈ ಬಾರಿ ಕರೋನ ಹರಡುವ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ.
ಜೇವರ್ಗಿಯ ಮಹಾಲಕ್ಷ್ಮಿ ಟ್ರಸ್ಟ್ ಕಮಿಟಿಯ ಅಧ್ಯಕ್ಷರು ಬಸವರಾಜ್ ಸಾಹುಕಾರ ಗೋಗಿ ಸಭೆ ಸೇರಿ ಪತ್ರಿಕಾ ಪ್ರಕಟಣೆ ನೀಡುವ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ. ಈ ವರ್ಷ ದೇವಿಯ ಭಕ್ತರು ತಮ್ಮ ತಮ್ಮ ಮನೆಯಲ್ಲಿ ಭಾವಚಿತ್ರಕ್ಕೆ ಸರಳವಾಗಿ ಪೂಜೆ ನೆರವೇರಿಸುವ ಮೂಲಕ ಆಚರಿಸಬೇಕೆಂದು ವಿನಂತಿಸಿದ್ದಾರೆ.
ಈ ವರ್ಷ ಜಾತ್ರೆಯನ್ನು ರದ್ದು ಪಡಿಸಲಾಗಿದ್ದು ಜನರು ಅನವಶ್ಯಕವಾಗಿ ಸೇರುವುದು ಹಾಗೂ ಇತರ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ನಡೆಸಿ ಪೂಜಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಕ್ತರು ಈ ಬಾರಿಯ ಜಾತ್ರೆಯನ್ನು ರದ್ದು ಗೊಳಿಸಿದ್ದಕ್ಕೆ ಸಹಕಾರ ನೀಡಬೇಕು ಹಾಗೂ ಕರೋನವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ನವಿ ಮಾಡಿದ್ದಾರೆ.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…