ಕಲಬುರಗಿ: ಸಿದ್ದರಾಮಯ್ಯಗಿಂತ ಹೆಚ್ಚಿನ ದಮ್ ನಮ್ಮ ಹತ್ತಿರ ಇದೆ ಎಂದು ಹೇಳಿದ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು, ದಮ್ ಅಂದ್ರೆ ಕುಸ್ತಿ ಆಡುವುದಲ್ಲ, ದಮ್ ಅಂದ್ರೆ ಪ್ರಧಾನಿ ಮೋದಿ ಮುಂದೆ ಕುಳಿತು ಪರಿಹಾರ ತೆಗೆದುಕೊಂಡು ಬರಲಿ. ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರು ಇದ್ದೂ ಪ್ರಯೋಜನವಿಲ್ಲ. ಪ್ರಧಾನಿ ಮೋದಿ ಬಳಿ ಹೋಗಿ ರಾಜ್ಯಕ್ಕೆ ಬರಬೇಕಾದ ಪರಿಹಾರ ತೆಗೆದುಕೊಂಡು ಬಂದು ತಮ್ಮ ದಮ್ ಎಷ್ಟಿದೆ ಎಂಬುದನ್ನು ತೋರಿಸಲಿ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಎರಡು ದಿನಗಳ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ ಹಾಗೂ ಬೀದರ್ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ಪ್ರವಾಸದಲ್ಲಿರುವ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬಿಜೆಪಿ ಅತ್ಯಂತ ಬ್ರಷ್ಟಸರಕಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಳೆ ಮಾದರಿಯಲ್ಲಿ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು, ಆದರೆ ಅವರ ಮಗ ಹೊಸ ಮಾದರಿಯಲ್ಲಿ 7 ಕೋಟಿ 40 ಸಾವಿರ ಆರ್ಟಿಜಿಎಸ್ ಮೂಲಕ ಮಾರ್ಡನ್ ಆಗಿ ಲಂಚ ಪಡೆಯುತ್ತಿದ್ದಾರೆಂದು ಆರೋಪಿಸಿದರು. ಮೂಲಕ ಮಾಡರ್ನ್ ಆಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಸ್.ವೈ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರಕಾರ ಮೊದಲು ಕೊರೊನಾ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿತ್ತು ಇದೀಗ ಪ್ರವಾಹ ಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ, ರಾಜ್ಯದ ಅಭಿವೃದ್ಧಿ ಕಾರ್ಯಾ ನಿಂತು ಹೋಗಿವೆ, ಆರ್ಥಿಕ ಪರಿಸ್ಥತಿ ಸಂಪೂರ್ಣ ಹದಗೆಟ್ಟಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ನೆರೆ ಸಂತ್ರಸ್ತರಿಗೆ ಇನ್ನೂ ನಯಾಪೈಸೆ ಹಣ ಬಂದಿಲ್ಲ, ವೈಮಾನಿಕ ಸಮೀಕ್ಷೆಯಿಂದ ಏನುಪ್ರಯೋಜನ, ಜನರ ಜೊತೆ ಮಾತನಾಡಬೇಕಿತ್ತು ಎಂದರು.
ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನ ಬಿಜೆಪಿ ಆಡಳಿತ ವಿರುದ್ಧ ರೋಸಿ ಹೋಗಿದ್ದಾರೆ. ಹೀಗಾಗಿ ಶಿರಾ ಮತ್ತು ಆರ್ ಆರ್ ನಗರದ ಉಪಚುನಾವಣೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಭರವಸೆ ಇದೆ ಎಂದರು.
ಬೀದರ್ ಜಿಲ್ಲೆಗೆ ಭೇಟಿ ನೀಡಿದ್ದ, ಸಿದ್ದು ಪ್ರವಾಹ ಪೀಡಿತ ಜನರೊಂದಿಗೆ ಮಾತುಕತೆ ನಡೆಸಿದರು.