ಕಲಬುರಗಿ: ನಗರದ ಎಂ.ಆರ್.ಮೆಡಿಕಲ್ ಕಾಲೇಜು, ಬಸವೇಶ್ವರ ಆಸ್ಪತ್ರೆ, ಶಾರದಾ ಕಾಲೇಜುಗಳಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಅಂಗವಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ.ನಮೋಶಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.
ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಾತನಾಡುತ್ತಾ ಅವರು, ನಮ್ಮ ಭಾಗದ ಶೈಕ್ಷಣಿಕ ಪ್ರಗತಿಯೇ ನನ್ನ ಕನಸಾಗಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕರ ಉಳಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರು ಮಾತನಾಡುತ್ತಾ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಮೋಶಿಯವರಿಗಿಂತ ಸೂಕ್ತ ವ್ಯಕ್ತಿ ಮತ್ತೊಬ್ಬರಿಲ್ಲ. ನಮ್ಮ ಭಾಗದ ಎಲ್ಲಾ ಶಿಕ್ಷಕರು ನಮೋಶಿಯವರಿಗೆ ಪ್ರಥಮ ಪ್ರಾಶ್ಯಸ್ತ್ಯದ ಮತವನ್ನು ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ರಮೇಶ ಕಡಾಳೆ, ಶಾಂತವೀರ ಬಡಿಗೇರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು ಎಂದು ಅರುಣ ಕುಲಕರ್ಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…