ಕಲಬುರಗಿ: ಕೋವಿಡ್-19 ಸೋಂಕು ಹಾಗೂ ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಸೂಚಿಸಿದರು.
ಮಂಗಳವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನ ಹಾಗೂ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗಿತ್ತು. ಕೋವಿಡ್ ಹಾಗೂ ಈಶಾನ್ಯ ಕರ್ನಾಟಕ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ರಾಜ್ಯೋತ್ಸವವನ್ನೂ ಸರಳವಾಗಿ ಆಚರಿಸಬೇಕಾಗಿದೆ ಎಂದ ಅವರು, ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಮೆರವಣಿಗೆ, ಸ್ತಬ್ಧ ಚಿತ್ರಗಳ ನಿರ್ಮಾಣ ಹಾಗೂ ಸಂಜೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳು ಕೂಡ ಇರುವುದಿಲ್ಲ ಎಂದು ಹೇಳಿದರು.
ನವೆಂಬರ್ 1 ರಂದು ನಗರೇಶ್ವರ ಶಾಲಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಇದಕ್ಕೂ ಮುನ್ನ ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಕೇಂದ್ರದಲ್ಲಿರುವ ಎಲ್ಲಾ ಕಚೇರಿಗಳ ಹಾಗೂ ವಿದ್ಯಾ ಸಂಸ್ಥೆಗಳಲ್ಲಿ ಸಂಬಂಧಪಟ್ಟ ಕಚೇರಿ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಧ್ವಜಾರೋಹಣ ಮಾಡಿ, ನಂತರ ನಗರೇಶ್ವರ ಶಾಲಾ ಮೈದಾನದಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯನ್ನು ಹೂದಾನಿಗಳಿಂದ ಸಿಂಗರಿಸಬೇಕು. ಧ್ವನಿವರ್ಧಕ, ಲೈಟ್ ಮುಂತಾದ ವ್ಯವಸ್ಥೆಗಳು ಸೇರಿದಂತೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಕ್ಟೋಬರ್ 31 ರಂದು ಸಂಜೆ 6 ಗಂಟೆಯೊಳಗಾಗಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.
ಮಿನಿ ವಿಧಾನಸೌಧ, ಮಹಾನಗರ ಪಾಲಿಕೆ ಕಚೇರಿ, ಕನ್ನಡಭವನ ಮುಂತಾದ ಸರ್ಕಾರಿ ಕಟ್ಟಡಗಳಿಗೆ ಅಕ್ಟೋಬರ್ 31 ಹಾಗೂ ನವೆಂಬರ್ 1 ರಂದು ವಿದ್ಯುದ್ದೀಪಲಂಕಾರ ಮಾಡಬೇಕು ಎಂದು ಕಲಬುರಗಿ ಪಾಲಿಕೆ ಆಯುಕ್ತರು ಹಾಗೂ ಜೆಸ್ಕಾಂ ಇಂಜಿನಿಯರ್‍ಗಳಿಗೆ ತಿಳಿಸಿದ ಅವರು, ಖಾಸಗಿ ಅಂಗಡಿ, ವಾಣಿಜ್ಯ ಮಳಿಗೆಗಳ ಮೇಲೂ ದೀಪಾಲಂಕಾರ ಮಾಡುವಂತೆ ಹೈದ್ರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಿಗೆ ತಿಳಿಸಬೇಕು ಎಂದು ಅವರು ಹೇಳಿದರು.
ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ, ವಾಣಿಜ್ಯ ಮಳಿಗೆ ಮುಂತಾದವುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಿರಬೇಕು. ನಾಮಫಲಕ ಇಲ್ಲದಂತಹ ಅಂಗಡಿ, ಮಳಿಗೆಗಳ ಗುರುತಿಸಿ, ಕನ್ನಡದಲ್ಲಿ ನಾಮಫಲಕ ಹಾಕಿಸಲು ಕ್ರಮಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು, ಉಪ ಕಾರ್ಮಿಕ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಡಿವೈಎಸ್‍ಪಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ, ಎಸಿಪಿ ಅನ್ಶುಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…