ಬಿಸಿ ಬಿಸಿ ಸುದ್ದಿ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರಳವಾಗಿ ಆಚರಿಸಲಾಗುವುದು-ಸುರೇಶ ವರ್ಮಾ

ಶಹಾಬಾದ:ಕೊರೊನಾ ರೋಗ ಮತ್ತು ಕಾಗಿಣಾ ಹಾಗೂ ಭೀಮಾ ನದಿಯ ಪ್ರವಾಹದಿಂದ ಬಹಳಷ್ಟು ಹಾನಿಯಾಗಿರುವುದನ್ನು ಗಮನದಲ್ಲಿಟ್ಟಕೊಂಡು ತಾಲೂಕಿನಲ್ಲಿ ನವೆಂಬರ್ 1ರಂದು ಆಯೋಜಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ನಗರದ ನಗರಸಭೆಯ ಸಭಾಂಗಣದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ ಮಾತನಾಡಿ, ಯಾವ ಕಾಲದ ಶಾಸ್ತ್ರವನ್ನು ಹೇಳಿದರೇನು? ಎದೆಯ ದನಿಗೂ ಮಿಗಿಲು ಶಾಸ್ತ್ರವಿಹಿದೇನು? ರಾಷ್ಟ್ರಕವಿ ಕುವೆಂಪು ಅವರ ಕವನ ವಾಚಿಸಿ, ಸರಳವಾಗಿ ಆಚರಿಸೋಣ ಎಂದರು.

ಕಸಾಪ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್ ಹಾಗೂ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ಈಗಾಗಲೇ ನಮ್ಮದೇ ತಾಲೂಕಿನಲ್ಲಿ ಪ್ರವಾಹದಿಂದ ಸಾಕಷ್ಟು ಬೆಳೆಹಾನಿಯಾಗಿದೆ. ಕರೊನಾ ಅಟ್ಟಹಾಸದಿಂದ ನಿರೋದ್ಯೋಗ ಸಮಸ್ಯೆ ಕಾಡುತ್ತಿದೆ.ವ್ಯಾಪರಸ್ಥರು ವ್ಯಾಪಾರವಿಲ್ಲದೇ ಸಂಕಷ್ಟದಲ್ಲಿದ್ದಾರೆ. ಆ ಪರಿಸ್ಥಿತಿಯನ್ನು ಅರಿತು ಆಚರಿಸಬೇಕಾಗಿದೆ. ಆದಷ್ಟು ಕಾರ್ಯಕ್ರಮವನ್ನು ಸರಳವಾಗಿ ಆಚರಿಸಬೇಕೆಂದು ತಿಳಿಸಿದರು.

ಕಸಾಪ ಮಾಜಿ ತಾಲೂಕಾಧ್ಯಕ್ಷ ನಾಗಣ್ಣ ರಾಂಪೂರೆ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಆಚರಣೆ ಜತೆಗೆ ಸಾಧನೆ ಮಾಡಿದ ಕಲಾವಿದರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಮಾಡಬೇಕೆಂದು ಹೇಳಿದರು.

ಕಸಾಪ ತಾಲೂಕಾಧ್ಯಕ್ಷ ಮೃತ್ಯುಂಜಯ್ ಹಿರೇಮಠ ಹಾಗೂ ಭರತ್ ಧನ್ನಾ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡೋಣ ಎಂದರು.

ಜಗನ್ನಾಥ.ಎಸ್.ಹೆಚ್, ಪೂಜಪ್ಪ ಮೇತ್ರೆ ಮಾತನಾಡಿ, ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಬಸವರಾಜ ಮಯೂರ ಮಾತನಾಡಿ, ನಮ್ಮ ತಾಲೂಕಿನವರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರೇಖಾ ಡೆಂಗಿ ಅವರನ್ನು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸೋಣ ಎಂದರು.

ಅದಕ್ಕೆ ತಹಸೀಲ್ದಾರರು ಸುರೇಶ ವರ್ಮಾ ಅವರು ಭೀಕರ ಪ್ರವಾಹದಿಂದ ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈಭವದ ರಾಜ್ಯೋತ್ಸವಕ್ಕೆ ಮನಸಾಕ್ಷಿ ಒಪ್ಪುವುದಿಲ್ಲ.ಯಾರ ಭಾವನೆಗೂ ದಕ್ಕೆ ಆಗದಂತೆ  ಈ ಬಾರಿ ಸರಳವಾಗಿ ಆಚರಿಸೋಣ ಎಂದರು.ಅಲ್ಲದೇ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುರೇಖಾ ಡೆಂಗಿ, ತಾಪಂ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಹಾಗೂ ನಗರಸಭೆಯಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗುವವರನ್ನು ಸನ್ಮಾನಿಸಲಾಗುವುದು.ಅಲ್ಲದೇ ಶಿಷ್ಟಾಚಾರದ ಪ್ರಕಾರ ಮಾತ್ರ ವೇದಿಕೆಯ ಮೇಲೆ ಗಣ್ಯರನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗುವುದೆಂದು ತಿಳಿಸಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಪಿಐ ಅಮರೇಶ.ಬಿ, ತಾಲೂಕ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ಸಾಬಣ್ಣ ಸುಂಗಲಕರ್, ಮರಲಿಂಗ ಕಮರಡಗಿ, ಮಲ್ಕಣ್ಣ ಮುದ್ದಾ, ರವಿ ಬೆಳಮಗಿ, ನಾಗಪ್ಪ ರಾಯಚೂರಕರ್, ವಿಶ್ವರಾಜ ಫೀರೋಜಬಾದ, ರಾಯಪ್ಪ ಹುರಮುಂಜಿ, ಗಿರಿಮಲ್ಲಪ್ಪ ವಳಸಂಗ ಹಾಗೂ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

emedia line

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

24 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago