ಬಿಸಿ ಬಿಸಿ ಸುದ್ದಿ

ನಾಳೆ ಶಿಕ್ಷಕರ ಮತಕ್ಷೇತ್ರದ ಚುನಾವಣೆ: ಒಟ್ಟು 647 ಸಿಬ್ಬಂದಿಗಳ ನೇಮಕ

ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾನವು ಬುಧವಾರ ಅಕ್ಟೋಬರ್ 28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಮತದಾನ ಕಾರ್ಯಕ್ಕಾಗಿ ಒಟ್ಟು 647 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ಡಾ. ಎನ್.ವಿ. ಪ್ರಸಾದ್ ಅವರು ತಿಳಿಸಿದ್ದಾರೆ.

ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯನ್ನೊಳಗೊಂಡಿರುವ ಈ ಕ್ಷೇತ್ರಗಳ ಚುನಾವಣಾ ಕಾರ್ಯಕ್ಕಾಗಿ 147 ಪ್ರಿಸೈಡಿಂಗ್ ಅಧಿಕಾರಿ, 147 ಸಹಾಯಕ ಪ್ರಿಸೈಡಿಂಗ್ ಅಧಿಕಾರಿ ಹಾಗೂ 294 ಚುನಾವಣಾ ಸಹಾಯಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಒಟ್ಟು ಸಿಬ್ಬಂದಿಗಳ ಶೇ. 10 ರಂತೆ 59 ಹೆಚ್ಚುವರಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕಾಗಿ ಮೀಸಲಿಡಲಾಗಿದೆ.

ಕ್ಷೇತ್ರದಾದ್ಯಂತಹ ಒಟ್ಟು 147 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 28, ಬೀದರ ಜಿಲ್ಲೆಯಲ್ಲಿ 34, ಕಲಬುರಗಿ ಜಿಲ್ಲೆಯಲ್ಲಿ 41, ಯಾದಗಿರಿ ಜಿಲ್ಲೆಯಲ್ಲಿ 7, ಕೊಪ್ಪಳ ಜಿಲ್ಲೆಯಲ್ಲಿ 20 ಹಾಗೂ ರಾಯಚೂರು ಜಿಲ್ಲೆಯಲ್ಲಿ 17 ಮತಗಟ್ಟೆಗಳು ಇರಲಿವೆ.

ಈ ಚುನಾವಣೆಯಲ್ಲಿ ಒಟ್ಟು 29236 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರ ಪೈಕಿ 18949 ಪುರುಷರು, 10285 ಮಹಿಳಾ ಹಾಗೂ 02 ಇತರೆ ಮತದಾರರು ಇದ್ದಾರೆ. ಜಿಲ್ಲಾವಾರು ಮತದಾರರನ್ನು ಗಮನಿಸಿದಾಗ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 6753 ಮತದಾರರು ಇದ್ದು, ಇದರ ಪೈಕಿ 4231 ಪುರುಷ ಹಾಗೂ 2522 ಮಹಿಳಾ ಮತದಾರರು ಇದ್ದಾರೆ. ಬೀದರ ಜಿಲ್ಲೆಯಲ್ಲಿ 4926 ಮತದಾರರು ಇದ್ದು, ಇದರ ಪೈಕಿ 3433 ಪುರುಷ ಹಾಗೂ 1493 ಮಹಿಳಾ ಮತದಾರರು ಇದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 9529 ಮತದಾರರು ಇದ್ದು, ಇದರ ಪೈಕಿ 5576 ಪುರುಷ, 3952 ಮಹಿಳಾ ಹಾಗೂ 1 ಇತರೆ ಮತದಾರರು ಇದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ 1961 ಮತದಾರರು ಇದ್ದು, ಇದರ ಪೈಕಿ 1446 ಪುರುಷ ಹಾಗೂ 515 ಮಹಿಳಾ ಮತದಾರರು ಇದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 2539 ಮತದಾರರು ಇದ್ದು, ಇದರಲ್ಲಿ 1840 ಪುರುಷ ಹಾಗೂ 699 ಮಹಿಳಾ ಮತದಾರರು ಇದ್ದಾರೆ. ರಾಯಚೂರು ಜಿಲ್ಲೆಯಲ್ಲಿ 3528 ಮತದಾರರು ಇದ್ದು, ಇದರ ಪೈಕಿ 2423 ಪುರುಷ, 1104 ಮಹಿಳಾ ಮತ್ತು ಇತರೆ 1 ಮತದಾರರು ಇದ್ದಾರೆ.

ಕೋವಿಡ್-19 ಸುರಕ್ಷತಾ ಕ್ರಮ: ಕೋವಿಡ್-19 ಹಿನ್ನೆಲೆಯಲ್ಲಿ ಮತದಾನಕ್ಕಾಗಿ ಮತ ಕೇಂದ್ರಕ್ಕೆ ಆಗಮಿಸುವ ಎಲ್ಲ ಮತದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಬೇಕು ಮತ್ತು ಮಾಸ್ಕ್ ಧರಿಸಬೇಕು. ಮತಗಟ್ಟೆಯಲ್ಲಿ ಮತದಾರರು ಸಾಮಾಜಿಕ ಅಂತರ ಕಾಪಾಡಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿ ಮತದಾನ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ಸಹ ನಿಯೋಜಿಸಲಾಗಿದೆ.

ನೋಟಾ ಆಯ್ಕೆ ಇರುವುದಿಲ್ಲ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಮತಪತ್ರಗಳಲ್ಲಿ ನೋಟಾ ಓಔಖಿಂ (ಓoಟಿe oಜಿ ಣhe ಚಿbove) ಆಯ್ಕೆ ಇರುವುದಿಲ್ಲ.

144 ನಿಷೇಧಾಜೆÐ ಜಾರಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ಚುನಾವಣೆ ನಡೆಸುವ ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯ ಮತದಾನ ಕೇಂದ್ರಗಳ ಸುತ್ತಲು ದಿನಾಂಕ 27.10.2020ರ ಬೆಳಿಗ್ಗೆ 6 ಗಂಟೆಯಿಂದ 28.10.2020ರ ಮಧ್ಯರಾತ್ರಿ 12 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಲಂ 144ರನ್ವಯ ನಿμÉೀಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

4 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

15 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago