ಹಿರಿಯ ಸಾಹಿತಿ ಡಿ.ಎನ್.ಅಕ್ಕಿ ಅವರಿಗೆ ರಾಜ್ಯೋತ್ಸವದ ಗಿರಿ

ಯಾದಗಿರಿ: ರಾಜ್ಯ ಸರ್ಕಾರ 2019 -20 ನೇ ಸಾಲಿಗೆ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದ ಹಿರಿಯ ಸಾಹಿತಿ ಸಂಶೋಧಕ ಶ್ರೀ ಡಿ.ಎನ್. ಅಕ್ಕಿ ಅವರು ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಡಿ.ಎನ್.ಅಕ್ಕಿ ಇವರು ಶಿಕ್ಷಕರಾಗಿ, ಸಾಹಿತಿಗಳಾಗಿ, ಸಂಶೋಧಕರಾಗಿ ಸುಮಾರು ಐವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದು ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಲ್ಲದೆ ಹಲವಾರು ಸಂಶೋಧನಾತ್ಮಕ ಕೃತಿಗಳನ್ನು ಹೊರತಂದಿದ್ದಾರೆ ಇವರ ಸಾಹಿತ್ಯ ಕೃಷಿಯ ಅನುಪಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ಇಲ್ಲಿವರೆಗೆ ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಇವರ ಸೇವೆ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಅಮೋಘವಾಗಿದೆ.

ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸಿದ್ದಲಿಂಗಣ್ಣ ಆನೇಗುಂದಿ, ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ,ಪಂಚಾಕ್ಷರಿ ಹಿರೇಮಠ, ಬಸವರಾಜ ಹಿರೇಮಠ,ಹಿರಿಯ ಸಾಹಿತಿಗಳಾದ ಸಿದ್ಧರಾಮ ಹೊನ್ಕಲ್,ವಿಶ್ವರಾಧ್ಯ ಸತ್ಯಂಪೇಟೆ,ಶಿವಣ್ಣ ಇಜೇರಿ,ಡಾ. ಮೋನಪ್ಪ ಶಿರವಾಳ ದೊಡ್ಡಬಸಪ್ಪ ಬಳೂರಗಿ, ಡಾ.ಅಬ್ದುಲ್ ಕರೀಂ ಕನ್ಯಾಕೋಳೂರ,ಲಿಂಗಣ್ಣ ಪಡಶೆಟ್ಟಿ,ಗೋಗಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲ್, ಹಾಗೂ ಇನ್ನಿತರರು ಹರ್ಷ ವ್ಯಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420