ಕಲಬುರಗಿ: ತಳವಾರ, ಪರಿವಾರದವರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಕೊಡದೆ ಹೋದರೆ ಮುಂದಿನ ದಿನಗಳಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಶರಣ ಕೊತ್ತಲಪ್ಪ ತೊನಸನಹಳ್ಳಿ ಭವಿಷ್ಯನುಡಿದಿದ್ದಾರೆ.
ಪರತಾಬಾದ ವಲಯ ಮಟ್ಟದ ತಳವಾರ, ಪರಿವಾರ ಎಸ್.ಟಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ತಳವಾರ ಪರಿವಾರ ಸಮುದಾಯದವರು ಮೊದಲಿನಂತೆ ದಡ್ಡರಲ್ಲ ಇವತ್ತು ಅವರಿಗೆ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಬಂದಿದೆ ಸಮಾಜದಲ್ಲಿನ ಇತರ ಸಮುದಾಯಗಳಂತೆ ಈ ಸಮುದಾಯಗಳು ಕೂಡ ತಮ್ಮ ಅಭಿವೃದ್ಧಿಗಾಗಿ ಪಣತೊಟ್ಟಿದೆ.
ಅದರಂತೆ ಅವರಿಗೆ ಈ ದೇಶದ ಪ್ರಜೆಗಳಿಗೆ ಸಿಗಬೇಕಾದ ಕಾನೂನು-ಸುವ್ಯವಸ್ಥೆ ಹಾಗೂ ಮೂಲಭೂತ ಹಕ್ಕುಗಳ ಅರಿವಿನಿಂದ ಇವತ್ತು ತಳವಾರ ಪರಿವಾರ ಸಮುದಾಯದವರು ರಾಜ್ಯದಲ್ಲಿ ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗೆ ಹಂತಹಂತವಾಗಿ ಹೋರಾಟ ನಡೆಸುತ್ತಿದ್ದಾರೆ ಕೂಡಲೇ ಸರಕಾರ ಎಚ್ಚೆತ್ತುಕೊಂಡು ಬೇಗನೆ ಈ ಸಮಸ್ಯೆಗೆ ಪರಿಹಾರ ಎಂಬಂತೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಬೇಕು ಒಂದುವೇಳೆ ನೀಡದೇ ಹೋದರೆ ಸಮಾಜದ ಜನರನ್ನು ಒಗ್ಗೂಡಿಸಿಕೊಂಡು ರಾಜ್ಯದಲ್ಲಿ ದೊಡ್ಡಮಟ್ಟದ ಹೋರಾಟ ಮಾಡಬೇಕಾಗುತ್ತದೆ ಅದರ ಪರಿಣಾಮ ಮುಂದಿನ ದಿನಗಳಲ್ಲಿ ಬಿಜೆಪಿ ಸರಕಾರ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಡಾ.ಸರ್ದಾರ್ ರಾಯಪ್ಪ ತಳವಾರ ಪರಿವಾರ S T ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷರು, ಹೋರಾಟ ಸಮಿತಿಯ ಮಹಿಳಾ ಮುಖಂಡರಾದ ಸುನಿತಾ ತಳವಾರ್ , ರಾಜೇಂದ್ರ ರಾಜವಾಳ, ಸಿದ್ದು ಬೂಸಾ, ಅವ್ವನ್ ಗೌಡ ಪಾಟೀಲ್, ಶಿವು ಸುಣಗಾರ್, ಸಿದ್ದು ತಳವಾರ್, ಆಕಾಶ್ ಬೂದಿಹಾಳ, ಸಾಯಿಬಣ್ಣ ಬಾಗೇವಾಡಿ, ಅಶೋಕ್ ತಳವಾರ್, ಸಂಜು ಸರಡಗಿ, ಬೆಳ್ಯಪ್ಪ ಶಾಬಾದ್, ರವಿ ಗೋಳಾ, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…