ಬಿಸಿ ಬಿಸಿ ಸುದ್ದಿ

ನಿವೃತ್ತ ಶಿಕ್ಷಕ ರೇವಣಸಿದ್ದಯ್ಯ ಸ್ಥಾವರಮಠ ನಿಧನಕ್ಕೆ ಸಂತಾಪ

ಸುರಪುರ: ನಗರದ ಸರಕಾರಿ ಪ್ರೌಢ ಶಾಲೆಯಲ್ಲಿ ಅನೇಕ ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ರೇವಣಸಿದ್ದಯ್ಯ ಸ್ಥಾವರಮಠ ನಿಧನರಾದರು.ಅವರಿಗೆ ೯೨ ವರ್ಷ ವಯಸ್ಸಾಗಿತ್ತು.ಪತ್ನಿ ೩ ಜನ ಗಂಡು ಹಾಗು ಒಬ್ಬಳು ಹೆಣ್ಣು ಮಗಳಿದ್ದು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ನಿವೃತ್ತ ಎಸ್ಪಿ ಚಂದ್ರಕಾಂತ ಭಂಡಾರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು,ರೇವಣಸಿದ್ದಯ್ಯ ಸ್ಥಾವರಮಠರು ನನ್ನ ಅಚ್ಚು ಮೆಚ್ಚಿನ ಶಿಕ್ಷಕರಾಗಿದ್ದು ಅವರು ಕಲಿಸಿದ ಇಂಗ್ಲೀಷ್ ಗ್ರಾಮರ್‌ನಿಂದಾಗಿ ಇಂದು ನಾವೆಲ್ಲ ಒಳ್ಳೆ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ.ನಮ್ಮ ಈ ಮೆಚ್ಚಿನ ಶಿಕ್ಷಕರಿಂದ ಕಲಿತ ಅನೇಕರು ಇಂದು ಡಾಕ್ಟರ್ ಇಂಜಿನಿಯರ್ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿದ್ದಾರೆ.ಇಂದು ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ ಎಂದು ತಮ್ಮ ಸಂತಾಪ ಸೂಚಿಸಿದ್ದಾರೆ.

ಅಲ್ಲದೆ ಕಸಾಪ ಮಾಜಿ ಅಧ್ಯಕ್ಷ ಶಾಂತಪ್ಪ ಬೂದಿಹಾಳ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸುರೇಶ ಸಜ್ಜನ್ ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ ರಾಜ್ಯ ಸಂಚಾಲಕ ಚಂದ್ರಶೇಖರ ಡೊಣೂರ ಜಿಲ್ಲಾಧ್ಯಕ್ಷ ಪ್ರದೀಫ ಕದರಾಪುರ ಬಸವರಾಜ ಬೂದಿಹಾಳ ಸೇರಿದಂತೆ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯ ತೀವ್ರ ಸಂತಾಪ ಸೂಚಿಸಿದೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

44 mins ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

47 mins ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

50 mins ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

55 mins ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

60 mins ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

1 hour ago