ಸುರಪುರ: ಈ ವರ್ಷ ಇಡೀ ರಾಜ್ಯದಲ್ಲಿ ಕೋವಿಡ್ ಇರುವ ಕಾರಣದಿಂದ ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಮಾತನಾಡಿದರು.
ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿ ಮಾತನಾಡಿ,ಶ್ರೀ ಮಹರ್ಷಿ ವಾಲ್ಮೀಕಿಯವರು ರಾಮಾಯಣದಂತಹ ಮಹಾನ್ ಗ್ರಂಥವನ್ನು ಬರೆದು ಕೊಟ್ಟ ಮಹರ್ಷಿಯಾಗಿದ್ದಾರೆ.ಅವರು ಬರೆದ ರಾಮಾಯಣ ಗ್ರಂಥವು ಜಗತ್ತೆ ಸ್ತುತಿಸುವ ಗ್ರಂಥವಾಗಿದೆ.ಇಂತಹ ಮಹಾನ್ ದಾರ್ಶನಿಕರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕಿತ್ತು ಆದರೆ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸುತ್ತಿದ್ದು ಮುಂಬರುವ ವರ್ಷದಲ್ಲಿ ಕೊರೊನಾ ನಿರ್ಮೂಲನೆಯಾಗಿ ಅದ್ಧೂರಿಯಾಗಿ ಜಯಂತಿ ಆಚರಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಗುರುಬಸಪ್ಪ ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ ಕೊಂಡಲನಾಯಕ ಹಾಗು ಮುಖಂಡರಾದ ಕೆಪಿಸಿಸಿ ಎಸ್ಟಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಗಂಗಾಧರ ನಾಯಕ ತಿಂಥಣಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬೇಟೆಗಾರ ವಿರುಪಾಕ್ಷಿ ಕೋನಾಳ ರಾಜಾ ಪಿಡ್ಡನಾಯಕ ಚಂದ್ರಶೇಖರ ಬಿಚಗತ್ತಿ ಕನಕಾಚಲ ನಾಯಕ ರಾಘವೇಂದ್ರ ನಾಯಕ ಜಕ್ಕಪ್ಪ ಸೇರಿದಂತೆ ಅನೇಕರಿದ್ದರು.