ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಹಿನ್ನೆಲೆ: ಅಗತ್ಯ ಪೂರ್ವಸಿದ್ಧತೆಗೆ ಆದೇಶ

0
77

ಕಲಬುರಗಿ: ಗ್ರಾಮೀಣ ಜನರ ಬದುಕು ಮತ್ತು ಬವಣೆಯನ್ನು ಸ್ವತ ಅರಿಯಲು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇದೇ ಜೂನ್ ಮಾಹೆಯಲ್ಲಿ ಹೈದ್ರಾಬಾದ ಕರ್ನಾಟಕ ಭಾಗದಿಂದಲೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕೂಡಲೆ ಅಗತ್ಯ ಪೂರ್ವಭಾವಿ ಸಿದ್ಧತೆ ಮಡಿಕೊಳ್ಳುವಂತೆ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅವರು ನಿರ್ದೇಶನ ನೀಡಿದರು.

ಅವರು ಗುರುವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಕಲಬುರಗಿ, ಬೀದರ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ಆಯುಕ್ತರೊಂದಿಗೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Contact Your\'s Advertisement; 9902492681

ಪ್ರಸ್ತುತ ಈಗಿನ ಮಾಹಿತಿ ಪ್ರಕಾರ ಮುಖ್ಯಮಂತ್ರಿಗಳು ಜೂನ್ 21 ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್, ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪೂರ, ಜೂನ್ 28 ರಂದು ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಜೂನ್ 29 ರಂದು ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಯಾವ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳು ವಾಸ್ತವ್ಯ ಎಂಬುದುರ ಕುರಿತು ಇನ್ನಷ್ಟೆ ಅಂತಿಮವಾಗಬೇಕಾಗಿದೆ. ಇದಲ್ಲದೆ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳೊಂದಿಗೆ ಈ ಕುರಿತು ಈಗಾಗಲೆ ಆಯಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದರು.

ಜೂನ್ 10 ರಂದು ಆಯಾ ಜಿಲ್ಲಾಧಿಕಾರಿಗಳು ಜಿಲ್ಲಾ ಹಂತದಲ್ಲಿ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಮಾಡಲಿರುವ ಗ್ರಾಮದಲ್ಲಿ ಕುಡಿಯುವ ನೀರು, ಜನತಾ ದರ್ಶನಕ್ಕೆ ಸೂಕ್ತ ಸ್ಥಳಾವಕಾಶ, ಹೆಲಿಪ್ಯಾಡ್ ವ್ಯವಸ್ಥೆ, ವಿದ್ಯುತ ಪೂರೈಕೆ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು. ಮುಖ್ಯಮಂತ್ರಿಗಳ ಮಹತ್ವಕಾಂಕ್ಷೆಯ ಕಾರ್ಯಕ್ರಮ ಇದಾಗಿರುವುದರಿಂದ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಯಾದಗಿರಿ ಜಿಲ್ಲಾಧಿಕಾರಿ ಎಂ.ಕುರ್ಮಾರಾವ, ಬೀದರ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಕಲಬುರಗಿ ಜಿ.ಪಂ ಸಿ.ಇ.ಓ ಡಾ.ಎ.ರಾಜಾ., ಯಾದಗಿರಿ ಜಿ.ಪಂ ಸಿ.ಇ.ಓ ಕವಿತಾ ಮನ್ನಿಕೇರಿ, ಬೀದರ ಜಿ.ಪಂ ಸಿ.ಇ.ಓ ಮಹಾಂತೇಶ ಬೀಳಗಿ, ಕಲಬುರಗಿ ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಬೀದರ ಸಹಾಯಕ ಆಯುಕ್ತ ಡಾ.ಶಂಕರ ವಣಿಕ್ಯಾಳ, ಬಸವಕಲ್ಯಾಣ ಸಹಾಯಕ ಆಯುಕ್ತ ಜ್ಞಾನೇಂದ್ರ ಗದ್ವಾರ, ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here