ಶಹಾಬಾದ:ಮನೆಯಲ್ಲಿ ಪ್ರತಿಯೊಬ್ಬರೂ ಕನ್ನಡ ಬಳಸುವ ಸಂಕಲ್ಪ ತೊಡುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ನಗರದಲ್ಲಿ ರವಿವಾರ ಎಸಬಿಐ ಬ್ಯಾಂಕನವರು ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕವಿಗಳು, ಸಾಹಿತಿಗಳು ಹಾಗೂ ನಮ್ಮ ಹಿರಿಯರು ಹೋರಾಟಗಳ ಮೂಲಕ ನಮ್ಮ ಮಾತೃ ಭಾಷೆ ಕನ್ನಡವನ್ನು ಉಳಿಸಿ ನಮಗೆ ಬಳುವಳಿಯಾಗಿ ನೀಡಿದ್ದಾರೆ. ನಾವು ಮಾತನಾಡುತ್ತಿರುವ ಅತಿ ಶ್ರೀಮಂತ ಭಾಷೆಯಾದ ಕನ್ನಡ ಹಾಗೂ ಕನ್ನಡ ನೆಲದಲ್ಲಿ ಹುಟ್ಟಿರುವುದೇ ನಮ್ಮ ಸೌಭಾಗ್ಯ.ಇಂಗ್ಲೀಷ ವ್ಯಾಮೋಹದ ಕಡೆಗೆ ವಾಲುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಎಸಬಿಐ ಬ್ಯಾಂಕ್ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಚರಿಸಿ, ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಎಸಬಿಐ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ.ವಿ ಮಾತನಾಡಿ, ಕನ್ನಡ ಭಾಷೆ ಸರಳ ಹಾಗೂ ಸುಲಲಿತವಾಗಿ ಆಡುವ ಶ್ರೀಮಂತ ಭಾಷೆ. ಈ ಶ್ರೀಮಂತ ಭಾಷೆಯನ್ನು ಬಳಸುವ ಮೂಲಕ ಹಾಗೂ ಇತರ ಜನರಿಗೆ ಕಲಿಸುವ ಮೂಲಕ ಈ ಕನ್ನಡ ನಾಡು ನುಡಿ ಶ್ರೀಮಂತಗೊಳಿಸುವ ಕೆಲಸವನ್ನು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸುಮಾರು 55 ವಿದ್ಯಾರ್ಥಿಗಳಿಗೆ ಬ್ಯಾಂಕಿನ ಪ್ರಸ್ತುತ ವ್ಯವಹಾರದ ಕುರಿತು ಕನ್ನಡದಲ್ಲಿಯೇ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಡಿವಾಯ್ಎಸ್ಪಿ ವೆಂಕನಗೌಡ ಪಾಟೀಲ,ಪಿಐ ಅಮರೇಶ.ಬಿ, ಕಸಾಪ ತಾಲೂಕಾಧ್ಯಕ್ಷ ಮೃತ್ಯುಂಜಯ್ ಹಿರೇಮಠ,ರವಿಕುಮಾರ ಅಲ್ಲಂಶೆಟ್ಟಿ, ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ,ರಾಜು ಕೋಬಾಳ, ಬ್ಯಾಂಕ್ ಸಿಬ್ಬಂದಿಗಳಾದ ಬಸವಪ್ರಭು, ವಿನಯಕುಮಾರ,ಶ್ರೀನಿಧಿ, ಮೋಹಿತ್, ಸಿದ್ದಪ್ಪ, ನಾಗೇಂದ್ರ, ಶಿವರಾಜ, ಶರಣಪ್ಪ, ಮಲ್ಲು,ಜೈಭೀಮ, ಚಂದ್ರು ಇತರರು ಇದ್ದರು.
ನಗರಸಭೆ ಶಹಾಬಾದ: ನಗರಸಭೆಯಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಧ್ವಜಾರೋಹಣ ನೇರವೇರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…