ಬೆಳಗಾವಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಬಂದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.
ಚೆನ್ನಮ್ಮ ವೃತ್ತಕ್ಕೆ ಬಂದು ಸಂಭ್ರಮಾಚರಣೆ ಮಾಡುತ್ತಿದ್ದ ಯುವಕರು ಗುಂಪು ಗುಂಪಾಗಿ ಸೇರಿದ್ದಕ್ಕೆ ಅವರನ್ನ ಓಡಿಸಲು ಪೊಲೀಸರು ಲಾಠಿ ಬೀಸಿದರು. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಯುವಕರು ಎದ್ನೋಬಿದ್ನೊ ಅಂತಾ ದಿಕ್ಕಾಪಾಲಾಗಿ ಓಡಿದರು. ಪೊಲೀಸರ ಕ್ರಮಕ್ಕೆ ಕನ್ನಡಪರ ಹೋರಾಟಗಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಯುವಕರನ್ನು ಚದುರಿಸುವ ಮುನ್ನ ಯುವಕರು ಪಟಾಕಿ ಸಿಡಿಸಿ ಕನ್ನಡಪರ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು. ನಗರದಲ್ಲಿ ಅದ್ಧೂರಿ ಮೆರವಣಿಗೆಗೆ ಬ್ರೇಕ್ ಹಾಕಿದರೂ ಕನ್ನಡಿಗರ ಉತ್ಸಾಹಕ್ಕಿಲ್ಲ ಬ್ರೇಕ್ ಬೀಳಲಿಲ್ಲ. ಕೆನ್ನೆಯ ಮೇಲೆ ಕನ್ನಡ ಧ್ಚಜದ ಕೆಂಪು ಹಳದಿ ಬಣ್ಣದ ಅಚ್ಚು ಹಾಕಿಸಿಕೊಂಡು ಸಂತಸಪಟ್ಟರು.
ಜೊತೆಗೆ, ಚೆನ್ನಮ್ಮ ವೃತ್ತದ ಎದುರು ಬೈಕ್ಗಳಿಗೆ ಕನ್ನಡ ಬಾವುಟ ಅಳವಡಿಸಿ ಬೈಕ್ ಸ್ಟಂಟ್ ಸಹ ಮಾಡುತ್ತಾ ಜೀಪ್ಗಳ ಮೇಲೆ ನಿಂತು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…