ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ೨೦೧೯-೨೦ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಲಿಚ್ಛಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-೧ಕ್ಕೆ ಸೇರಿದ ಬೆಸ್ತ, ಅಂಬಿಗ/ಅಂಬಿ, ಬಾರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆ ಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಲಿಗ, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮೊಗವೀರ, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ ಮತ್ತು ವಾಗಿ ಜಾತಿಗೆ ಸೇರಿದವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ. ದೊಳಗಿರಬೇಕು. ವಯೋಮಿತಿ ೧೮ ರಿಂದ ೫೫ ವರ್ಷದೊಳಗಿರಬೇಕು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ೨ನೇ ಮಹಡಿ, ಸಿಟಿ ಸ್ಕ್ವೆರ್ ಬಿಲ್ಡಿಂಗ್, ಬಡೇಪೂರ ೩ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಹಾಗರಗಾ ರಿಂಗ್ ರೋಡ್, ಕಲಬುರಗಿ-೫೮೫೧೦೫ ಹಾಗೂ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ೨೦೧೯ರ ಜುಲೈ ೩ ರೊಳಗಾಗಿ ಪಡೆಯಬೇಕು ಅಥವಾ ನಿಗಮದ http://10.10.29.73:81/ambigaradevelopment.karnataka.gov.in/pubic ವೆಬ್‌ಸೈಟ್‌ದಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2019ರ ಜುಲೈ 12 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2019-20ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ ಹಾಗೂ ಸಮಗ್ರ ಗಂಗಾ ಕಲ್ಯಾಣ (ವೈಯಕ್ತಿಕ ನೀರಾವರಿ ಕೊಳವೆ ಭಾವಿ) ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು 2019ರ ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ www.karnataka.gov.in/kmvstdcl ವೆಬ್‌ಸೈಟ್‌ನ್ನು ಅಥವಾ ಕಲಬುರಗಿ ಐವಾನ್ ಶಾಹಿ ರಸ್ತೆ (ಮಿನಿ ವಿಧಾನಸೌಧ ಎದುರಿಗೆಯಿರುವ) ಸಮಾಜ ಕಲ್ಯಾಣ ಇಲಾಖೆಯ ನೆಲಮಹಡಿಯಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-221331ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…