ಚಿಂಚೋಳಿ: ರಟಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ NRWDP ಯೋಜನೆ ಅಡಿಯಲ್ಲಿ ಮಂಜೂರು ಆದ ಹೊಸ ಭಾವಿ ಕೆಲಸ ಪ್ರಾರಂಭಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶರಣಪ್ಪ ಮಮಶೆಟ್ಟಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ NRWDP ಹಾಗೂ HKRDB ಯ 62 ಲಕ್ಷ ರೂಪಾಯಿ ಅನುದಾನದಲ್ಲಿ ಹೊಸ ಬಾವಿ, ಪೈಪ್ ಲೈನ್ ಹಾಗೂ ನೀರಿ ಟಾಕಿ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಗುತಿಗೆದ್ದಾರರು ಕೆಲಸ ಮಾಡದೆ ಬಿಡುಗಡೆಯಾದ ಹಣವನ್ನು ದುರ್ಪಯೋಗ ಮಾಡಿಕೊಳುವದರ ಜೊತೆಗೆ ಹೊಸ ಬಾವಿ ಹಾಗೂ ನೀರಿನ ಟ್ಯಾಂಕ್ ನಿರ್ಮಾಸುವ ಕುರಿತು ಇಲ್ಲ ಸಲ್ಲದ ನೆಪವುಡ್ಡಿ ಕಾಮಗಾರಿ ನಿಲ್ಲಿಸಿದ್ದಾರೆಂದು ಅವರು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಬರ ಇದ್ದು, ಗುತೇದಾರರು ಹಾಗೂ ಅಧಿಕಾರಿಗಳು ಕೆಲಸ ಪೂರ್ಣಗೊಳಿಸುತ್ತಿಲ್ಲ. ಗ್ರಾಮದಲ್ಲಿ ನೀರಿನ ಪರಿಹಾರ ಹಾಗೂ ನೀರಿನ ವ್ಯವಸ್ಥೆಗಾಗಿ ಮಂಜುರಾದ ಹೊಸ ಬಾವಿ ಹಾಗೂ ನೀರಿನ ಟ್ಯಾಂಕ್ ಕಾಮಗಾರಿಕೆ ಪ್ರಾರಂಭಿಸಿ ಗ್ರಾಮಕ್ಕೆ ನೀರು ಒದಗಿಸುವ ಕೆಲಸ ಮಾಡಬೇಕೆಂದು ಅವರು ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮದ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…