ಕಲಬುರಗಿ: ಸರ್ಕಾರ ಪ್ರತ್ಯೇಕತೆಯ ಕೂಗಿಗೆ ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಹೈದ್ರಾಬಾದ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸರ್ಕಾರದ ಮಲತಾಯಿ ಧೋರಣೆ ಮತ್ತು ನಿರಂತರ ನಿರ್ಲಕ್ಷದ ಕಾರಣ ಈ ಹಿಂದೆ 1987 ರಿಂದ ಹೈದ್ರಾಬಾದ ಕರ್ನಾಟಕ ಪ್ರದೇಶ ಪ್ರತ್ಯೇಕ ರಾಜ್ಯ ಬೇಕು ಇಲ್ಲವೆ ಅಭಿವೃದ್ಧಿ ಮಾಡಿರಿ ಎಂಬ ಕೂಗು ಆರಂಭವಾಯಿತು. ಈ ಪ್ರತ್ಯೇಕತೆಯ ಕೂಗಿಗೆ ಆಗ ಆಡಳಿತದಲ್ಲಿ ಇದ್ದ ಸರಕಾರಗಳು ಗಂಭೀರವಾಗಿ ಪರಿಗಣಿಸಿ 1990ರಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪನೆ, ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಪೂರಕವಾಗಿ ವಿಶೇಷ ಅನುದಾನದಂಥ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲು ಆರಂಭಿಸಿತು.
ಅದರಂತೆ ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದ 371ನೇ ಕಲಂ ತಿದ್ದುಪಡಿಯ ಸಂವಿಧಾನಬದ್ದ ವಿಶೇಷ ಸ್ಥಾನಮಾನದ ಬೇಡಿಕೆಗೆ ಎಲ್ಲಾ ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯಿಂದ ಸಂವಿಧಾನದಲ್ಲಿ ತಿದ್ದುಪಡಿಯಾಗಿ ಜಾರಿಗೆ ಬಂದರೂ ಸಹ ಇದರ ಪರಿಣಾಮಕಾರಿ ಅನುಷ್ಠಾನ ಆಗದೆ ಇರವದು ಈ ಪ್ರದೇಶದ ಜನಮಾನಸಕ್ಕೆ ನಿರಾಸೆಯಾಗಿದೆ. ವೃತ್ತಿಪರ ಸೀಟು ಬಿಟ್ಟರೆ ಬೇರೆ ಹೇಳಿಕೊಳ್ಳುವಂಥ ಯಾವ ಫಲ ನಮಗೆ ಸಿಗುತ್ತಿಲ್ಲ.
2019ರಲ್ಲಿ ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಗಳಾಗದ ನಂತರ ನಮ್ಮ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ನಾಮಕರಣ ಮಾಡಿ 371ನೇjಕಲಂ ತಿದ್ದುಪಡಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಮಂತ್ರಾಲಯ ಸ್ಥಾಪನೆ ಮಾಡುವ ಬಗ್ಗೆ ಕಳೆದ ವರ್ಷ ಅಧಿಕೃತವಾಗಿ ಘೋಷಣೆ ಮಾಡಿರದರು, ಇದರಿಂದ ನಾವು ಬಹಳ ಖುಷಿ ಪಟ್ಟಿದ್ದೇವು ಆದರೆ ಈ ಘೋಷಣೆ ಕೇವಲ ಭರವಸೆಯಾಗಿ ಉಳಿಯಿತು. ಒಂದು ಕಡೆ ಮಂತ್ರಿ ಮಂಡಳದಲ್ಲಿ ಸಿಗಬೇಕಾದ ಪ್ರಾತಿನಿದಿತ್ವ ಸಿಕ್ಕಿಲ್ಲ.
ಮತ್ತೊಂದೆಡೆ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಬರುತ್ತಿಲ್ಲ ಇಂತಹ ನಿರ್ಲಕ್ಷದ ಸಂದರ್ಭಗಳು ನಿರ್ಮಾಣವಾದರರೆ ಪ್ರತ್ಯೇಕತೆ ಕೂಗು ಸಹಜವಾಗಿಯೇ ಏಳುತ್ತದೆ, ಸರ್ಕಾರ ಇದಕ್ಕೆ ಗಂಭೀರವಾಗಿ ಪರಿಗಣಿಸಿ ಪ್ರತ್ಯೇಕತೆಯ ಕೂಗಿಗೆ ಅವಕಾಶ ನೀಡದೆ, ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಗೆ ವಿಶೇಷ ಸ್ಥಾನಮಾನಕ್ಕೆ ತಕ್ಕಂತೆ ವಿಶೇಷ ಆದ್ಯತೆ ನೀಡಲು ಸಮಿತಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸರ್ಕಾರಕ್ಕೆ ಒತ್ತಾಯಿಸುತ್ತದೆ ಅದರಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ ಪಕ್ಷಗಳ ನಾಯಕರು ಈ ಬಗ್ಗೆ ಸಂಘಟಿತ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲು ಅಗ್ರಹಹಿಸುತ್ತದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…