ಸುರಪುರ: ಇಂದಿನ ಯುವಕರು ಹಾಗೂ ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ದೇವರಗೋನಾಲ ಪಂಚಾಯತಿ ಮಾಜಿ ಅಧ್ಯಕ್ಷ ಸಣ್ಣದೇಸಾಯಿ ದೇವರಗೋನಾಲ ಹೇಳಿದರು.
ಸಮೀಪದ ದೇವರಗೋನಾಲ ಗ್ರಾಮದಲ್ಲಿ ಶ್ರೀ ಗುರು ಸೇವಾ ಸಂಸ್ಥೆ ಬಾದ್ಯಾಪುರವತಿಯಿಂದ ಆಯೊಜಿಸಿದ್ದ ಗ್ರಾಮದ ಯುವಕರಿಗೆ ಉಚಿತವಾಗಿ ಕ್ರೀಡಾ ಸಾಮಾಗ್ರಿಗಳು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಹೆಚ್ಚು ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢಹೊಂದಲು ಸಾದ್ಯಾವಾಗುತ್ತದೆ ಹಾಗೂ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿದಿನ ಕೆಲವು ಸಮಯವಾದರು ಇಂದಿನ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ ಬೆಳವಣಿಗೆ ಆ ದೀಶೆಯಲ್ಲಿ ಶ್ರೀ ಗುರು ಸಂಸ್ಥೆಯಿಂದ ಉಚಿತವಾಗಿ ಕ್ರೀಡಾ ಸಾಮಾಗ್ರಿ ನೀಡುವ ಮೂಲಕ ಉತ್ತಮ ಕಾರ್ಯಮಾಡಿದೆ ಎಂದು ಅಭಿಪ್ರಾಯ ಪಟ್ಟರು.
ಮುಖ್ಯ ಅತಿಥಿಗಳಾಗಿ ಬಸವರಾಜ ದಿವಳಗುಡ್ಡ, ಸಿದ್ದಣ್ಣಗೌಡ ಹೆಬ್ಬಾಳ, ಭೀಮರಾಯ ದೈಹಿಕ ಶಿಕ್ಷಕರು ವೇದಿಕೆ ಮೇಲಿದ್ದರು, ಗ್ರಾಮದ ಮೌನೇಶ್ವರ ದೇವಸ್ಥಾನದ ಅರ್ಚಕರಾದ ನಿಂಗಯ್ಯ ಮುತ್ಯ ಸಾನಿದ್ಯ ವಹಿಸಿದ್ದರು, ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶ್ರೀ ಗುರು ಸೇವಾ ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ, ಪ್ರಾಸ್ತಾವಿಕವಾಗಿ ಮಾತನಾಡಿದರು, ಸಚೀನ ದೇವರಗೋನಾಲ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…