ಸುರಪುರ: ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಹಳೆ ತಹಸೀಲ್ ಕಚೇರಿ ಬಳಿಯಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಆಟೋ ಘಟಕದ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಆಟೋ ಘಟಕ ಉದ್ಘಾಟಿಸುವ ಜೊತೆಗೆ ಧ್ವಜಾರೋಹಣ ನೆರವೇರಿಸಿದ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮೀನಾರಾಯಣ ನಾಯಕ ಮಾತನಾಡಿ,ನಮ್ಮ ಕನ್ನಡ ನಾಡಿಗೆ ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸವಿದೆ ಇಂತಹ ನಾಡನ್ನು ಇಲ್ಲಿಯ ಕಲೆ ಸಂಸ್ಕೃತಿಯನ್ನು ಅನೇಕ ರಾಜ ಮನೆತನಗಳು ಆಳುವ ಜೊತೆಗೆ ನಾಡನ್ನು ಕಟ್ಟುವ ಕೆಲಸ ಮಾಡಿವೆ,ಇಂತಹ ನಾಡಿಗಾಗಿ ಸೇವೆ ಮಾಡುವ ಭಾಗ್ಯ ನಮಗೆಲ್ಲರಿಗು ಸಿಕ್ಕಿದೆ,ಆದ್ದರಿಂದ ಎಲ್ಲರು ಕನ್ನಡಿಗರಾಗಿ ನಾಡ ಸೇವೆಯಲ್ಲಿ ತೊಡಗೋಣ.ನಾವು ಕನ್ನಡಿಗರೆಂಬ ಹೆಮ್ಮೆ ಎಲ್ಲರಲ್ಲಿ ಸದಾ ಇರಲಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಸೇನೆ ಆಟೋ ಘಟಕವನ್ನು ಉದ್ಘಾಟಿಸಲಾಯಿತು ಹಾಗು ಕನ್ನಡ ಧ್ವಜಾಸ್ತಂಭವನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ರಾಜಾ ಪಿಡ್ಡ ನಾಯಕ ವೆಂಕೋಬ ದೊರೆ ಬೊಮ್ಮನಹಳ್ಳಿ ಮಲ್ಲು ವಿಷ್ಣುಸೇನಾ ಮಾನಪ್ಪ ನಾಯಕ ದುರ್ಗಪ್ಪ ಡೊಣ್ಣಿಗೇರಾ ರಾಮಕೃಷ್ಣ ಕೆಂಚಪ್ಪ ದವಲಸಾಬ್ ವಿಜಯಕುಮಾರ ಬಡಿಗೇರ ಶಿವು ಕವಡಿಮಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು,ಕನ್ನಡ ಸೇನೆ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹೊಸಮನಿ ನೇತೃತ್ವ ವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…