ಕಲಬುರಗಿ: ಕರ್ನಾಟಕದಲ್ಲಿ ಈಗಾಗಲೇ ಚುನಾವಣಾ ಪರ್ವ ಆರಂಭವಾಗಿರುವ ಬೆನ್ನಲ್ಲೇ ಒಂದರ ಮೇಲೊಂದರಂತೆ ಚುನಾವಣೆಗಳು ನಡೆಯುತ್ತಿರುವುದು ಸಂತೋಷದ ವಿಷಯ. ಆದರೆ ಈಗಾಗಲೇ ಗ್ರಾಮ ಪಂಚಾಯತ್ ಅವಧಿ ಮುಗಿದು ಐದು ತಿಂಗಳು ಕಳೆದರು ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರಕಾರ ಆಸಕ್ತಿ ತೋರಿಸದೆ ನಿರ್ಲಕ್ಷಿಸಿ ಈವರೆಗೂ ಚುನಾವಣಾ ದಿನಾಂಕ ಘೋಷಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಶರಣು ಹೊಸಮನಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಹೇಳಿಕೆ ನೀಡಿದ ಅವರು , ಗ್ರಾಮೀಣ ಭಾಗಗಳಲ್ಲಿ ಜನಪ್ರತಿನಿಧಿಗಳಿಲ್ಲದ ಕ್ಷೇತ್ರಗಳು ಕಿಂಚಿತ್ತು ಅಭಿವೃದ್ಧಿ ಕಾಣದೇ ಮೂಲ ಸೌಕರ್ಯದಿಂದ ವಂಚಿತವಾಗಿವೆ. ಜೊತೆಗೆ ಆಗಬೇಕಾಗಿರುವ ಕೆಲಸಗಳು ಹಾಗೇಯೇ ನಿಂತಿವೆ. ಸರಕಾರ ಕೇವಲ ಕೊರೊನಾ ನೆಪವೊಡ್ಡಿ ಗ್ರಾಮ ಪಂಚಾಯತ್ ಚುನಾವಣೆ ನಡೆಸದಿರುವುದು ನಿಜಕ್ಕೂ ದುಃಖಕರವಾಗಿದೆ ಎಂದರು.
ಈಗಾಗಲೇ ವಿಧಾನ ಪರಿಷತ್ ಚುನಾವಣೆ ನಡೆದು ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆಯು ಮುಗಿಯುತ್ತಾ ಬಂದಿದೆ. ಈ ಚುನಾವಣೆಗಳಿಗೆ ಎದುರಾಗದೇ ಇರುವ ಕೊರೊನಾ , ಗ್ರಾಮ ಪಂಚಾಯತಿ ಚುನಾವಣೆಗಳಿಗೆ ಮಾತ್ರ ಅಡಿಯಾಗುತ್ತದೆಯೇ ? ಎಂದು ಪ್ರಶ್ನಿಸಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಡಳಿತ ವಿಕೆಂದ್ರೀಕರಣ ಪರಿಣಾಮಕಾರಿಯಾಗಿ ಕೆಲಸ ಮಾಡಲು ರಾಜ್ಯ ಸರಕಾರ ದಯಮಾಡಿ 6,021 ಗ್ರಾಮ ಪಂಚಾಯತಿಗಳಿಗೆ ಶೀಘ್ರವೇ ಚುನಾವಣೆಗೆ ದಿನಾಂಕ ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…