ಕಲಬುರಗಿ: ಕಾರ್ಮಿಕರ ಭವಿಷ್ಯ ನಿಧಿ ಕಾರ್ಯಾಲಯದ ವತಿಯಿಂದ ಡಿಜಿಟಲ್ ಜೀವನ್ ಪ್ರಮಾಣಪತ್ರವನ್ನು ಪ್ರತಿ ವರ್ಷದಂತೆ ನವೆಂಬರ್‌ನಲ್ಲಿಯೇ ಸಲ್ಲಿಸುವ ಅಗತ್ಯವಿರುವುದಿಲ್ಲ. ಹೊಸ ನಿಯಮದಂತೆ ಈಗಾಗಲೇ ಸಲ್ಲಿಸಿರುವ ಜೀವನ ಪ್ರಮಾಣ ಪತ್ರದ ಸಿಂಧುತ್ವ ಒಂದು ವರ್ಷದವರೆಗೆ ಅವಕಾಶ ನೀಡಿದೆ.
ಭವಿಷ್ಯ ನಿಧಿ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಸಿದ ದಿನಾಂಕದಿಂದ ಸರಿಯಾಗಿ ಒಂದು ವರ್ಷದ ನಂತರ ಮತ್ತೊಮ್ಮೆ ಪ್ರಮಾಣ ಪತ್ರ ಸಲ್ಲಿಸಬಹುದಾಗಿದ್ದು, ಪಿಂಚಣಿದಾರರು ತಾವು ಅಕೌಂಟ್ ಹೊಂದಿರುವ ಬ್ಯಾಕಿನಲ್ಲಿ ಅಥವಾ ಸಮೀಪದ ಸಾಮಾನ್ಯ ಸೇವಾ ಕೇಂದ್ರದಲ್ಲಿ ಪ್ರಮಾಣ ಪತ್ರ ಸಲ್ಲಿಸಬಹುದಾಗಿದೆ.
ಪಿಂಚಣಿದಾರರು ತಪ್ಪದೇ ತಮ್ಮ ಆಧಾರ ಸಂಖ್ಯೆ, ಬ್ಯಾಂಕ್ ಅಕೌಂಟ್ ನಂಬರ, ಪಿ.ಪಿ.ಓ ನಂಬರ ಹಾಗೂ ಮೊಬೈಲ್ ನಂಬರ ಹೊಂದಿರಬೇಕು. ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಡಿಜಿಟಲ್ ಜೀವನ್ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಶ್ರೀ ಡಿ.ಹನುಮಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…