ಶಹಾಪುರ: ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಶಾಪುರ್ ಪಟ್ಟಣ ದಿನೇ ದಿನೇ ಬೆಳೆಯುತ್ತಿದ್ದು ನಗರದ ಜೆಸ್ಕಾಂ ವಿಭಾಗೀಯ ಕಚೇರಿಯನ್ನು ಕೂಡಲೇ ಆರಂಭಿಸಬೇಕೆಂದು ಸರಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಮಲ್ಲಯ್ಯ ಪೊಲಂಪಲ್ಲಿ ಒತ್ತಾಯಿಸಿದರು.
ಸುಮಾರು ವರ್ಷಗಳಿಂದ ಅಭಿವೃದ್ಧಿಯ ಕೆಲಸಗಳು ನೆನೆಗುದಿಗೆ ಬಿದ್ದಿರುವುದು ಸರಕಾರದ ಹಾಗೂ ರಾಜಕೀಯ ವ್ಯಕ್ತಿಗಳೇ ಎಂದು ಅಸಮಾಧಾನ ವ್ಯಕ್ತಪಡಿಸಿದರು ಕೆಲವೊಂದು ಜೆಸ್ಕಾಂ ಅಧಿಕಾರಿಗಳು ಅಕ್ರಮ ಹಗರಣದಲ್ಲಿ ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕೆಂದು ಚೆನ್ನಪ್ಪ ಆನೆಗುಂದಿ ಎಚ್ಚರಿಕೆ ನೀಡಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಂ. ಸಾಗರ್ ಮಾತನಾಡಿ ಜೆಸ್ಕಾಂ ನಂಬಿಕೊಂಡು ಹಲವಾರು ರೈತರು ತಮ್ಮ ತಮ್ಮ ಹೊಲಗಳಲ್ಲಿ ಪಂಪ್ ಸೆಟ್ಟನ್ನು ಹಾಕಿಕೊಂಡಿದ್ದಾರೆ ಆದರೆ ರೈತರಿಗೆ ಪೂರಕವಾಗಿ ಜೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕೂಗು ಕೇಳಿಬರುತ್ತಿದೆ. ಅಲ್ಲದೆ ಸಾರ್ವಜನಿಕರಿಂದ ವಿಪರೀತ ಹಣ ವಸೂಲಿ ದಂಧೆಯಲ್ಲಿ ಜೆಸ್ಕಾಂ ಅಧಿಕಾರಿಗಳು ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿದ್ದಯ್ಯ ಹಿರೇಮಠ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ದಾವಲಸಾಬ್ ನದಾಫ್, ನಿಂಗಣ್ಣ ತನಿಖೆದಾರ್, ಜೈಲಾಲ್ ತೋಟದಮನಿ, ಹಣಮಂತ ಟೋಕಾಪೂರ್, ಭೀಮಣ್ಣ, ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮಹಮ್ಮದ್ ಖಾಲಿದ್, ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…