ರೈತ-ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟನೆ : ಹಲವರ ಬಂಧನ

0
107

ಕಲಬುರಗಿ: ಕೇಂದ್ರ ಸರಕಾರ ರೈತ-ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳನ್ನು ಜಾರಿ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಿಪಿಎಂ ಜಿಲ್ಲಾ ಕಾಂiiದರ್ಶಿ ಶರಣ ಬಸಪ್ಪ ಮಮಶೆಟ್ಟಿ ನೇರೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆಗೆ ತಂದಿರುವ ಸುಗ್ರಿವಾಜ್ಞೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆಹಾವಳಿಯಿಂದ ಜನತೆ ಪಡಬಾರದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕಾದ ಸರಕಾರ, ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವಂತಹ ನೀತಿಗಳನ್ನು ಜಾರಿ ಮಾಡುತ್ತಿವೆ.

ಸರಕಾರ ತನ್ನ ನೀತಿಯನ್ನು ಬದಲಾಯಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದೆಂದು ಶರಣ ಬಸಪ್ಪ ಮಮಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ರಸ್ತೆ ತಡೆದು ಪ್ರತಿಭಟಿಸಿದ ಪ್ರತಿಭಟಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಎ.ಐ.ಕೆ.ಎಸ್ ಮುಖಂಡರಾದ ಮೌಲಾ ಮುಲ್ಲಾ, ಭೀಮಾಶಂಕರ ಮಾಡುಯಾಳ, ಮಹೇಶ್ ಸೇರಿ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ರಸ್ತೆ ತಡೆ ಮುಂದುವರಿಸಿದಾಗ ಪೊಲೀಸರು ಬಲವಂತವಾಗಿ ಹೋರಾಟಗಾರರನ್ನು ಎಳೆದೊಯ್ದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here