ಬಿಸಿ ಬಿಸಿ ಸುದ್ದಿ

ನಗರದ ಸಮಸ್ಯೆಗಳ ನಿವಾರಣೆಗೆ ಎಲ್ಲರು ಸೇರಿ ಕೆಲಸ ಮಾಡೋಣ: ಸುಜಾತಾ ವಿ.ಜೇವರ್ಗಿ

ಸುರಪುರ: ಇಲ್ಲಿಯ ನಗರಸಭೆಗೆ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಸುಜಾತಾ ವೇಣುಗೋಪಾಲ ಜೇವರ್ಗಿ ಮತ್ತು ಮಹೇಶ ಎಸ್.ಎನ್.ಪಾಟೀಲ್ ಕಳೆದ ೨೮ ರಂದು ಅವಿರೋಧವಾಗಿ ನೇಮಕಗೊಂಡಿದ್ದರು.

ಗುರುವಾರ ಬೆಳಿಗ್ಗೆ ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಿತು.ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುಜಾತಾ ವೇಣುಗೋಪಾಲ ಜೇವರ್ಗಿಯವರು ಮಾತನಾಡಿ,ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ ಅದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದ್ದು ಇನ್ನೂ ಅನೇಕ ಸಮಸ್ಯೆಗಳು ನಗರದಲ್ಲಿವೆ ಎಲ್ಲ ಸಮಸ್ಯೆಗಳನ್ನು ನಿವಾರಿಸಲು ಆಡಳಿತ ವಿರೋಧ ಪಕ್ಷ ಎಂಬ ಯಾವುದೇ ಭೇದವಿಲ್ಲದೆ ಎಲ್ಲರು ಸೇರಿ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡೋಣ,ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು.

ಉಪಾಧ್ಯಕ್ಷ ಮಹೇಶ ಎಸ್.ಎನ್.ಪಾಟೀಲ್ ಮಾತನಾಡಿ, ನಗರದ ಜನತೆ ಯಾವುದೇ ಸಮಸ್ಯೆಗಳಿಗಾಗಿ ಕರೆ ಮಾಡಿದರೆ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸ್ಪಂಧಿಸಿ ಮತ್ತು ಯಾವುದೇ ಕಾರಣಕ್ಕೂ ಫೋನ್‌ಗಳನ್ನು ಬಂದ್ ಮಾಡಬೇಡಿ ಮತ್ತು ಯಾರೇ ಕರೆ ಮಾಡಿದರೆ ಸ್ವೀಕರಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ಜೇವರ್ಗಿ ಮಾತನಾಡಿ,ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಕೆಲಸ ಮಾಡಲು ಉತ್ತಮ ಅವಕಾಶ ಲಭಿಸಿದೆ ಜನರ ಸಮಸ್ಯೆಗಳಿಗೆ ಸ್ಪಂಧಿಸಿ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.ಅಲ್ಲದೆ ನಾನು ಒಬ್ಬ ಸಾಮಾನ್ಯ ಪ್ರಜೇಯಾಗಿ ತಮ್ಮ ಗಮನಕ್ಕೆ ತರಬಯಸುತ್ತಿದ್ದು ಜನರ ಸಮಸ್ಯೆಗಳಿಗೆ ತಾವು ಸ್ಪಂಧಿಸದಿದ್ದಲ್ಲಿ ಜನರೊಂದಿಗೆ ಸೇರಿ ನಿಮ್ಮ ವಿರುಧ್ಧವೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಇದೇ ಸಂದರ್ಭದಲ್ಲಿ ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಇಬ್ಬರಿಗೂ ನಗರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮುಖಂಡ ರಾಜಾ ಹನಮಪ್ಪ ನಾಯಕ (ತಾತಾ) ನಗರಸಭೆ ಸದಸ್ಯರಾದ ಸೋಮನಾಥ ಡೊಣ್ಣಿಗೇರಾ ರಾಜಾ ಪಿಡ್ಡನಾಯಕ (ತಾತಾ)ಶಿವಕುಮಾರ ಕಟ್ಟಿಮನಿ ಮಹ್ಮದಗೌಸ್ ಅಯ್ಯಪ್ಪ ಕುಂಬಾರಪೇಟೆ ಜೆಟ್ಟೆಪ್ಪ ವಣಕಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago