ಕಲಬುರಗಿ: ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಯಾಘನ ಧಾರವಾಡಕರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ನವೆಂಬರ್ 2008 ರಿಂದ ಅಕ್ಟೋಬರ್ 2010 ರವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು, ಇಂದು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಅಧ್ಯಕ್ಷ ಪದವಿ ನೀಡಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಇದಕ್ಕೆ ಸಹಕಾರ ನೀಡಿದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ.ಸಿ. ಪಾಟೀಲ್ ರೇವೂರ ಇನ್ನಿತರರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಸಿ. ರೇವೂರ, ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ, ಪ್ರಾಧಿಕಾರದ ಆಯುಕ್ತರಾದ ಎಂ.ರಾಚಪ್ಪ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.