ಶಹಾಬಾದ:ಹಳೆಶಹಾಬಾದನ ನಿವಾಸಿ ಮತ್ತು ನಿವೃತ್ತ ಶಿಕ್ಷಕರಾದ ಗುಂಡಪ್ಪ ವಳಸಂಗ (77) ಅವರು ಗುರುವಾರದಂದು ನಿಧನರಾದರು.
ಮೃತರಿಗೆ ಇಬ್ಬರು ಪುತ್ರಿಯರು ಮತ್ತು ಮೂವ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರು ಇದ್ದಾರೆ.
ಇವರ ಅಂತ್ಯಕ್ರಿಯೆ ಹಳೆಶಹಾಬಾದನ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬ ವರ್ಗವದರು ತಿಳಿಸಿದ್ದಾರೆ.
ಶೋಕ: ಗುಂಡಪ್ಪ ವಳಸಂಗ ಅವರ ನಿಧನಕ್ಕೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಭಂಕೂರ ಬಸವ ಸಮಿತಿಯ ಪದಾಧಿಕಾರಿಗಳು, ಕುರುಬ ಸಮಾಜದ ಅಧ್ಯಕ್ಷ ಮಲ್ಕಣ್ಣ ಮುದ್ದಾ, ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ, ವಿಶ್ವಜ್ಯೋತಿ ಪ್ರತಿಷ್ಠಾನದ ವಿಜಯಕುಮಾರ ತೇಗಲತಿಪ್ಪಿ, ಶರಣ ಸಾಹಿತಿ ಶಿವರಂಜನ್ ಸತ್ಯಂಪೇಟೆ, ಸಾಮಾಜಿಕ ಚಿಂತಕರಾದ ಸಂಜಯ ಮಾಕಲ್, ಲೋಹಿತ್ ಕಟ್ಟಿ, ಕಸಾಪ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ಕಸಾಪ ನಗರಾಧ್ಯಕ್ಷ ಮಲ್ಲಿಕರ್ಜುನ ಪೂಜಾರಿ,ಚಿತ್ತಾಪೂರ ಅನುದಾನಿತ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…