ಶಹಾಬಾದ:ನಗರಸಭೆಯ ನೂತನ ಅಧ್ಯಕ್ಷರಾಗಿ ಅಂಜಲಿ ಗಿರೀಶ ಕಂಬಾನೂರ ಮತ್ತು ಉಪಾಧ್ಯರಾಗಿ ಸಲೀಮಾಬೇಗಂ ಮೆಹಬೂಬ ಗುರುವಾರದಂದು ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ನಗರಸಭೆಯ ನೂತನ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ನಗರಸಭೆಯ ಅಧ್ಯಕ್ಷೆಯಾಗಿ ನಗರದ 27 ವಾರ್ಡಗಳ ಸರ್ವೋತೋಮುಖ ಅಭಿವೃದ್ಧಿಯನ್ನು ಅಲ್ಲಿನ ವಾರ್ಡ ಸದಸ್ಯರ ಹಾಗೂ ನಿವಾಸಿಗಳ ಸಹಕಾರದಿಂದ ಮಾಡುವುದು ನನ್ನ ಆದ್ಯತೆಯಾಗಿದೆ ಎಂದು ತಿಳಿಸಿದರು. ನಗರದ ರಸ್ತೆ, ಚರಂಡಿ, ಬೀದಿ ದೀಪ ದೀಪ, ಕುಡಿಯುವ ನೀರು, ಸಾರ್ವಜನಿಕ ಮೂತ್ರಾಲಯ ಹಾಗೂ ಶೌಚಾಲಯ ಸೇರಿದಂತೆ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನನ್ನ ಜವಾಬ್ದಾರಿಯಾಗಿದ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆಗೊಂಡ ಜನಪ್ರತಿನಿಧಿಗಳು ಜನರ ಆಶಯಕ್ಕೆ ಬದ್ಧತೆಯಿಂದ ಕೆಲಸ ನಿರ್ವಹಿಸುವುದು ಮೊದಲ ಕರ್ತವ್ಯ. ಶಹಾಬಾದ ನಗರವನ್ನು ಎಲ್ಲಾ ಸದಸ್ಯರ ಹಾಗೂ ನಗರಸಭೆಯ ಅಧಿಕಾರಿ ವರ್ಗದವರ ಸಹಕಾರದಿಂದ ಉತ್ತಮ ನಗರವನ್ನಾಗಿ ಮಾಡುವ ಸಂಕಲ್ಪ ನನಗಿದೆ ಎಂದು ತಿಳಿಸಿದರು.
ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಬದಲಾವಣೆ ಸೃಷ್ಠಿಯ ನಿಯಮ.ಈ ಹಿನ್ನೆಲೆಯಲ್ಲಿ ಅಧಿಕಾರ ಮತ್ತು ಅಧಿಕಾರಿಗಳು ಬದಲಾಗುತ್ತಲೇ ಇರುತ್ತವೆ.ಅಧಿಕಾರ ಇರುವ ಸಮಯದಲ್ಲಿ ಮಾಡುವ ಉತ್ತಮ ಕಾರ್ಯಗಳು ಅವರ ಸೇವೆಯನ್ನು ಜೀವಂತವಾಗಿ ಇರಿಸುತ್ತವೆ.ಅದಕ್ಕಾಗಿ ಉತ್ತಮ ಕಾರ್ಯಗಳಿಗೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಉಪಾಧ್ಯಕ್ಷ ವಿಜಯಕುಮಾರ ಮಟ್ಟತ್ತಿ, ಪ್ರಧಾನ ಕಾರ್ಯದಶರ್ಿ ಮೃತ್ಯುಂಜಯ್ ಹಿರೇಮಠ, ಯಾಕೂಬ ಮರ್ಚಂಟ, ಕುಮಾರ ಚವ್ಹಾಣ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ಅನ್ವರ ಪಾಶಾ, ಹಾಷಮ್ ಖಾನ, ರಾಜೇಶ ಯನಗುಂಟಿಕರ್, ನಗರಸಭೆಯ ಅಧಿಕಾರಿಗಳಾದ ಸುನೀಲುಮಾರ, ಶಿವರಾಜಕುಮಾರ ಜಟ್ಟೂರ್,ಸಾಬಣ್ಣ ಸುಂಗಲಕರ್, ನಗರಸಭೆಯ ಸದಸ್ಯರು ಹಾಗೂ ನಗರಸಭೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…