ಬಿಸಿ ಬಿಸಿ ಸುದ್ದಿ

ಟೈಲರ್ಸ್ ಕಲ್ಯಾಣ ಮಂಡಳಿ ಜಾರಿಗೆ ಆಗ್ರಹ

ಕಲಬುರಗಿ: ಕರ್ನಾಟಕ ರಾಜ್ಯಾದ್ಯಾಂತ ಟೈಲರ್ ವೃತ್ತಿ ಮಾಡುವವರು ಅಸಂಘಟಿತ ವಲಯದವರಾಗಿದ್ದು, ಯಾವುದೇ ಸೌಲತ್ತುಗಳಿಲ್ಲದೆ ಬಳಲುತ್ತಿದ್ದಾರೆ. ಟೈಲರ್‌ಗಳ ಕಲ್ಯಾಣ ಮಂಡಳಿಗೆ ಟೆಕ್ಸಟೈಲ್ ಮಿಲ್ಸ್, ಗಾರ್ಮೆಂಟ್ಸ್, ಬಟ್ಟೆ ಅಂಗಡಿಗಳು ಹಾಗೂ ಬಟ್ಟೆ ಹೊಲಿಗೆಗೆ ಪೂರಕವಾಗಿ ಉತ್ಪನ್ನ ಮಾಡುವ ಸರಕುದಾರ ಉತ್ಪಾದಕರಿಂದ ಶೇ ೨% ಸೆಸ್ ಸಂಗ್ರಹ ಮಾಡುವ ಮೂಲಕ ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತಂದು ರಾಜ್ಯಾದ್ಯಂತ ಇರುವ ಟೈಲರ್‌ಗಳ ಹಾಗೂ ಟೈಲರ್‌ಗಳ ಕುಟುಂಬದವರಿಗೆ ನೆರವು ನೀಡಬೇಕೆಂದು ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಪ್ರಭುದೇವ ಯಳಸಂಗಿ ಒತ್ತಾಯಿಸಿದ್ದಾರೆ.

ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಷಯದ ಕುರಿತು ಒತ್ತಾಯಿಸಿ 9 ರಂದು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಲಾಗುವುದೆಂದು ತಿಳಿಸಿದರು.

ಇಂದು ಟೈಲರ್ ವೃತ್ತಿಯಲ್ಲಿ ತೊಡಗಿರುವವರಲ್ಲಿ ಪುರುಷರು ಸೇರಿದಂತೆ ಬಹುತೇಕ ಮಹಿಳೆಯರಿದ್ದಾರೆ. ಮನೆಗಳಲ್ಲಿ ಬಟ್ಟೆ ಹೊಲಿಯುವ, ಅಂಗಡಿಗಳಲ್ಲಿ ಹೊಲಿಯುವ, ಕಾರ್ಮಿಕರ ಕಾಯ್ದೆ ಅನ್ವಯಿಸದೆ ಇರುವ ಸಣ್ಣ ಸಣ್ಣ ಗಾರ್ಮೆಂಟ್ಸ್ ಘಟಕಗಳಲ್ಲಿ ಟೈಲರಿಂಗ ಮಾಡುವ ಟೈಲರ್‌ಗಳು ನಮ್ಮ ರಾಜ್ಯದಲ್ಲಿ ಸುಮಾರು ೨೦ ಲಕ್ಷದಷ್ಟಿರುವ ಅಂದಾಜಿದೆ. ಟೈಲರ್ ವೃತ್ತಿ ಮಾಡುತ್ತಿರುವವರಲ್ಲಿ ಪ್ರೌಢಶಿಕ್ಷಣ ಪಡೆದವರಿದ್ದಾರೆ. ಪದವಿ ಪೂರ್ವ ಶಿಕ್ಷಣ ಪಡೆದವರೂ ಇದ್ದಾರೆ. ಕನಿಷ್ಠ ಪ್ರೌಢಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪಡೆದ ಇವರುಗಳು ಸರ್ಕಾರಿ ಕೆಲಸ ಕಾಯ್ದೆ ಸ್ವಯಂ ಉದ್ಯೋಗ ಹುಡುಕಿಕೊಳ್ಳುವಲ್ಲಿ ಮುಂದಾಗಿ ಟೈಲರಿಂಗ್ ತರಬೇತಿ ಪಡೆದು ಸ್ವತಃ ಟೈಲರ್ ವೃತ್ತಿ ಮಾಡುತ್ತಿದ್ದಾರೆ. ಕೆಲವರು ಸಣ್ಣಪುಟ್ಟ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿದ್ದರೂ ಅಲ್ಲಿನ ಕೆಲಸಗಾರರು ಇಪ್ಪತ್ತರ ಸಂಖ್ಯೆಯ ಒಳಗಿರುವುದರಿಂದ ಅಲ್ಲಿ ಅವರಿಗೆ ಕಾರ್ಮಿಕ ಕಾಯ್ದೆ ಅನ್ವಯಿಸದೆ ಇರುವುದರಿಂದ ಕಾಯ್ದೆಬದ್ಧ ಕಾನೂನಿಗೆ ವಂಚಿತರಾಗಿದ್ದಾರೆ ಎಂದು ತಿಳಿಸಿದರು.

ಧನ ಸಹಾಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಕಾಲರ್‌ಶಿಪ್, ಮಕ್ಕಳ ಮದುವೆಗೆ ಧನ ಸಹಾಯ, ಅಪಘಾತ ಪರಿಹಾರ, ಪಿಂಚಣಿ ವ್ಯವಸ್ಥೆ, ಮಹಿಳಾ ಟೈಲರ್‌ಗಳಿಗೆ ಎರಡು ಮಕ್ಕಳಿಗೆ ಹೆರಿಗೆ ಭತ್ಯೆ ಧನಸಹಾಯ, ಟೈಲರ್‌ಗಳ ಸಹಜ ಸಾವು ಮತ್ತು ಅಪಘಾತ ಸಾವು, ಪರಿಹಾರ ಮುಂತಾದ ಸೌಲಭ್ಯಗಳನ್ನು ಒದಗಿಸಲು ಸರಕಾರ ಟೈಲರ‍್ಸ್ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಕಾನೂನು ಸಲಹೆಗಾರರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ, ಜಿಲ್ಲಾ ಸಂಚಾಲಕರಾದ ಕಲ್ಯಾಣಿ ತುಕ್ಕಾಣಿ, ಅನಿತಾಬಾಯಿ ಭಕರೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

6 hours ago