ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಗೇಡಿಗಳು

0
175

ವಿಜಯಪುರ: ನಂದಿ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಇಂದು ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ.

ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ.

Contact Your\'s Advertisement; 9902492681

ಎನ್ಟಿಪಿಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here