ಬೆಂಗಳೂರು: ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ ಎಂದು ವಿಪಕ್ಷ ನಾಯಕಾರ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದು ಕಿಟಿಕಾರಿದ್ದಾರೆ.
‘ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ತಾಕಿತು ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…