ಶಹಾಬಾದ:ನಗರದಲ್ಲಿ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು ಜಾಗವಿಲ್ಲದ ಕಾರಣ, ಸರ್ಕಾರಿ ಗೈರಾಣಿ ಜಮೀನಿನಲ್ಲಿ ಎರಡು ಎಕರೆ ಜಾಗ ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ಕರ್ನಾಟಕ ನವನಿರ್ಮಾಣ ವೇದಿಕೆಯ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ.ಕೆ.ನಾಟೀಕಾರ, ಈಗಾಗಲೇ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು 2016-17ನೇ ಸಾಲಿನಲ್ಲಿ 1 ಕೋಟಿ ರೂಪಾಯಿ ಮಂಜೂರಾಗಿದ್ದು, ಸದರಿ ಭವನದ ನಿರ್ಮಾಣ ಮಾಡಲು ನಗರದಲ್ಲಿ ಜಾಗವಿಲ್ಲ.ಆದ್ದರಿಂದ ಸರಕಾರಿ ಗೈರಾಣಿ ಜಮೀನು ಸರ್ವೆ ನಂ.184 ರಲ್ಲಿ 27 ಎಕರೆ 38 ಗುಂಟೆ ಜಮೀನು ಲಭ್ಯವಿದೆ.ಆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಮಂಜೂರು ಮಾಡಬೇಕು.ಇದರಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಮದುವೆ, ವಿಚಾರಗೋಷ್ಠಿ, ವಿಚಾರ ಸಂಕೀರಣ, ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಲು ಅನುಕೂಲವಾಗುತ್ತದೆ.ಆದ್ದರಿಂದ ಕೂಡಲೇ 2 ಎಕರೆ ಜಮೀನು ಮಂಜೂರು ಮಾಡಿ, ಭವನದ ನಿಮರ್ಾಣಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.
ಕರ್ನಾಟಕ ನವನಿರ್ಮಾಣ ವೇದಿಕೆಯ ಕಲಬುರಗಿ ನಗರಾಧ್ಯಕ್ಷ ಸುದರ್ಶನ.ಎಸ್, ಕರ್ನಾಟಕ ನವನಿರ್ಮಾಣ ವೇದಿಕೆಯ ಶಹಾಬಾದ ಅಧ್ಯಕ್ಷ ನಾಗರಾಜ ಮುದ್ನಾಳ, ಉಪಾಧ್ಯಕ್ಷ ದ್ವಾರಕನಾಥ ಭಂಡಾರಿ, ಪ್ರಧಾನ ಕಾರ್ಯದರ್ಶಿ ಅಂಬರೇಷ ಮೈನಾಳಕರ್,ಕಾರ್ಯದರ್ಶಿ ರೇವಣಸಿದ್ದಪ್ಪ ಪಸಪುಲ್, ಸಹಕಾರ್ಯದರ್ಶಿ ರವಿ ಹುಸನಪ್ಪಾ, ಶಿವರಾಜ ಕೋರೆ, ರವಿ ಬೆಳಮಗಿ, ಶರಣು ಪಗಲಾಪೂರ,ಕರ್ಣ ಕಾಳನೂರ,ನಾಗಪ್ಪ ರಾಯಚೂರಕರ್,ನಂದಕಿಶೋರ ಕಾಂಬಳೆ, ಮರಲಿಂಗ ಮಂಡಿ ಇತರರು ಇದ್ದರು.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…