ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ ಉಸ್ತುವಾರಿ ಸಚಿವರಿಂದ ಪರಿಹಾರ ಚೆಕ್ ವಿತರಣೆ

0
229

ಕಲಬುರಗಿ: ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಮಂಗಲಗಿ ಗ್ರಾಮದಲ್ಲಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಮೂವರ ಕುಟುಂಬದ ಸದಸ್ಯರಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ತಲಾ ರೂ 5 ಲಕ್ಷ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಮೃತರ ಕುಟುಂಬ ವರ್ಗದವರಿಗೆ  ಆಶ್ರಯ ಯೋಜನೆಯಡಿಯಲ್ಲಿ ಮನೆ ಮಂಜೂರು ಮಾಡುವಂತೆ ಸ್ಥಳದಲ್ಲಿ ಇದ್ದ ಚಿತ್ತಾಪುರ ತಹಸೀಲ್ದಾರ ಅವರಿಗೆ ಸಚಿವರು ಸೂಚಿಸಿದರು.

ಶಫಿಕಾ‌ ಬೇಗಂ, ಅಲ್ಫಿಯಾ ಬೇಗಂ ಹಾಗೂ ಅಬೇದಾಬಿ ಈ ಮೂವರು ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here